ಮಧ್ಯಪ್ರದೇಶ, ರಾಜಸ್ತಾನದಲ್ಲಿ ‘ಕೈ’ಗೆ ಆನೆ ಬಲ

ಈ ಸುದ್ದಿಯನ್ನು ಶೇರ್ ಮಾಡಿ

Mayavathi-011
ನವದೆಹಲಿ, ಡಿ.12- ಮಧ್ಯಪ್ರದೇಶ ಮತ್ತು ರಾಜಸ್ತಾನ ರಾಜ್ಯಗಳಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್‍ಗೆ ಬೆಂಬಲ ನೀಡುವುದಾಗಿ ಬಹುಜನ ಸಮಾಜ ಪಕ್ಷದ ಪರಮೋಚ್ಚ ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿ ಮಾಯಾವತಿ ಘೋಷಿಸಿದ್ದಾರೆ.

ಜಾತಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ಹಾಗೂ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‍ಗೆ ಬೆಂಬಲ ನೀಡಲು ನಿರ್ಧರಿಸಿರುವುದಾಗಿ ಸುದ್ದಿಗೋಷ್ಠಿಯಲ್ಲಿ ಮಾಯಾವತಿ ತಿಳಿಸಿದ್ದಾರೆ.
ಕಾಂಗ್ರೆಸ್‍ನ ತತ್ವಾದರ್ಶಗಳನ್ನು ನಾವು ಒಪ್ಪುವುದಿಲ್ಲ. ಆದರೂ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯುವುದು ನಮ್ಮ ಉದ್ದೇಶ. ಅದಕ್ಕಾಗಿ ಕಾಂಗ್ರೆಸ್‍ಗೆ ಬೆಂಬಲ ನೀಡುತ್ತಿರುವುದಾಗಿ ಅವರು ಕಾರಣ ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ 114ಸ್ಥಾನಗಳನ್ನು ಗಳಿಸಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಕಾಂಗ್ರೆಸ್‍ಗೆ ಬಹುಮತಕ್ಕಾಗಿ ಎರಡು ಸ್ಥಾನಗಳ ಕೊರತೆ ಇದೆ. ಬಿಎಸ್‍ಪಿ ಎರಡು ಸ್ಥಾನಗಳನ್ನು ಗೆದ್ದಿರುವುದರಿಂದ ಈ ಬೆಂಬಲದೊಂದಿಗೆ ಸರಳ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಲಿದೆ.

ಇನ್ನು ರಾಜಸ್ತಾನದಲ್ಲಿ 99 ಸ್ಥಾನ ಗೆದ್ದಿರುವ ಕಾಂಗ್ರೆಸ್‍ಗೆ ಸರ್ಕಾರ ರಚಿಸಲು ಒಂದು ಸ್ಥಾನದ ಕೊರತೆ ಇದೆ. ಅಲ್ಲಿ ಬಿಎಸ್‍ಪಿ ಆರು ಸ್ಥಾನಗಳನ್ನು ಗಳಿಸಿದೆ. ಈ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ.

Facebook Comments

Sri Raghav

Admin