ಮೂವರು ದರೋಡೆಕೋರರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

B policeಬೆಂಗಳೂರು, ಡಿ.15- ತಡರಾತ್ರಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಮೂವರನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮಪುರದ ಸರವಣ(21), ಮಂಜುನಾಥ (23), ಪ್ರೇಮ್ ಕಿರಣ್ (21) ಬಂಧಿತ ಆರೋಪಿಗಳಾಗಿದ್ದು, ಇವರಿಂದ ಕೃತ್ಯಕ್ಕೆ ಬಳಸುತ್ತಿದ್ದ ಚಾಕುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಡಿ.10ರಂದು ಮಹಮ್ಮದ್ ಇರ್ಫಾನ್ ಎಂಬುವರು ಕೆಲಸ ಮುಗಿಸಿಕೊಂಡು ತಡರಾತ್ರಿ ಮರಿಯಪ್ಪನಪಾಳ್ಯದ 12ನೇ ಕ್ರಾಸ್‍ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮೂವರು ದರೋಡೆಕೋರರು ಇವರನ್ನು ಅಡ್ಡಗಟ್ಟಿ ಬೆದರಿ ಹಣ ಸುಲಿಗೆ ಮಾಡಿ ಪರಾರಿಯಾಗಿದ್ದರು.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ರಾಜಾಜಿನಗರ ಠಾಣೆ ಪೊಲೀಸರು ತನಿಖೆ ನಡೆಸಿ ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ.

ಆರೋಪಿಗಳು ಬೊಮ್ಮನಹಳ್ಳಿ, ಮಾಗಡಿ ರಸ್ತೆ, ಶ್ರೀರಾಮಪುರ, ಸುಬ್ರಹ್ಮಣ್ಯ ನಗರ, ರಾಜಾಜಿನಗರ ಠಾಣೆಯ ಡಕಾಯಿತಿ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ವಿಚಾರಣೆಯಿಂದ ತಿಳಿದು ಬಂದಿದೆ.
ಆರೋಪಿಗಳು ದುಶ್ಚಟಕ್ಕೆ ದಾಸರಾಗಿ ಹಣ ಹೊಂದಿಸಲು ರಾತ್ರಿ ವೇಳೆ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತಿದ್ದುದ್ದಾಗಿ ವಿಚಾರಣೆಯಿಂದ ತಿಳಿದು ಬಂದಿದೆ.

Facebook Comments