ರೈತರ ಸಾಲ ಮನ್ನಾಗೆ ಕಾಂಗ್ರೆಸ್ ಬದ್ಧ: ರಾಹುಲ್

ಈ ಸುದ್ದಿಯನ್ನು ಶೇರ್ ಮಾಡಿ

Rahulನವದೆಹಲಿ,ಡಿ.15- ಪಂಚರಾಜ್ಯ ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ್ದ ಆಶ್ವಾಸನೆಯಂತೆ ಕಾಂಗ್ರೆಸ್ ಪಕ್ಷ ರೈತರ ಸಾಲಮನ್ನಾ ಮಾಡಲು ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.  ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್ ಪ್ರಚಾರದ ವೇಳೆ ಭರವಸೆ ನೀಡಿದ್ದರು. ಇದೀಗ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.
ಹೀಗಾಗಿ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದು ಚುನಾವಣಾ ಪೂರ್ವ ನೀಡಿದ್ದ ಭರವಸೆಯನ್ನು ಶೀಘ್ರದಲ್ಲೇ ಈಡೇರಿಸುವುದಾಗಿ ರಾಹುಲ್ ಮತ್ತೆ ಭರವಸೆ ನೀಡಿದ್ದಾರೆ.

ಪಕ್ಷ ಈಗ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕಾರದ ಗದ್ದುಗೆ ಹಿಡಿದಿದ್ದೇವೆ. ರೈತರ ಸಾಲಮನ್ನಾ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ದೃಢಪಡಿಸಿದ್ದಾರೆ.
ರಾಹುಲ್ ನಾಯಕತ್ವದ ಮೇಲೆ ಭರವಸೆ ಇಟ್ಟು ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಘಡದ ಜನತೆ ಕಾಂಗ್ರೆಸ್‍ಗೆ ಮತ ನೀಡಿದ್ದಾರೆ. ಪ್ರಚಾರದ ವೇಳೆ ರಾಹುಲ್ ನೀಡಿದ್ದ ಆಶ್ವಾಸನೆ, ಭರವಸೆಗಳು ಕಾರ್ಯರೂಪಕ್ಕೆ ಬರಲಿದೆ ಎಂದು ರೈತರು ನೀರಿಕ್ಷೆಯಲ್ಲಿದ್ದಾರೆ.
ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು ಒಂದು ಅಸ್ತ್ರವಾಗಿ ಬಳಸಿಕೊಂಡಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಸಂಪೂರ್ಣ ಸಾಲಮನ್ನಾದ ಭರವಸೆಯನ್ನು ಉಳಿಸಿಕೊಳ್ಳುವುದೇ ಮುಂದೆ ಕಾದುನೋಡಬೇಕು.

Facebook Comments