ಭ್ರಷ್ಟ ಸರ್ಕಾರದತ್ತ ಕಾಂಗ್ರೆಸ್ ಒಲವು ಪ್ರಧಾನಿ ಮೋದಿ ವಾಗ್ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

madiನವದೆಹಲಿ, ಡಿ.15- ಕಾಂಗ್ರೆಸ್ ಮತ್ತು ಎಡ ಪಕ್ಷಗಳ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ. ಬಿಜೆಪಿಗೆ ಶೀಘ್ರಗತಿಯ ಆಡಳಿತ ಹಾಗೂ ಅಭಿವೃದ್ಧಿ ಬೇಕಾಗಿದೆ. ಆದರೆ, ಕಾಂಗ್ರೆಸ್ ಮತ್ತು ಎಡ ಪಕ್ಷಗಳಿಗೆ ಭ್ರಷ್ಟಾಚಾರದಿಂದ ಕೂಡಿದ ಸರ್ಕಾರವನ್ನು ಹಿಂಬಾಲಿಸುತ್ತವೆ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಬಯಸುವ ಸರ್ಕಾರ ಅದಕ್ಷತೆ ಹಾಗೂ ಭ್ರಷ್ಟಾಚಾರದಿಂದ ಕೂಡಿದೆ. ಆದರೆ, ಬಿಜೆಪಿಯದ್ದು ಮಾದರಿ ಸರ್ಕಾರವಾಗಿದೆ ಎಂದು ಮೋದಿ ಹೇಳಿದ್ದಾರೆ.
ಕೇರಳದ ಹಲವು ಜಿಲ್ಲಾಗಳ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ವಿಡಿಯೋ ಸಂವಾದದಲ್ಲಿ ಈ ವಿಷಯ ಹೇಳಿದ್ದಾರೆ.

ರಾಜಕೀಯ ದ್ವೇಷಕ್ಕಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಯತ್ತಿದೆ. ಅತಿ ಕೆಟ್ಟ ರಾಜಕೀಯ ದ್ವೇಷಕ್ಕಾಗಿ ನಮ್ಮ ಕಾರ್ಯಕರ್ತರು ತಮ್ಮ ಪ್ರಾಣ ಬಲಿ ನೀಡುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತದ ಬೆಳೆಯುತ್ತಿರುವ ಭಾರತದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಮೋದಿ ತಿಳಿಸಿದ್ದಾರೆ.

Facebook Comments