‘ನಮ್ಮ ಮೆಟ್ರೋ’ ಸೇಫ್ ಅಂದ ದೆಹಲಿಯ ತಜ್ಞರು

ಈ ಸುದ್ದಿಯನ್ನು ಶೇರ್ ಮಾಡಿ

metroಬೆಂಗಳೂರು,ಡಿ.15-ಟ್ರಿನಿಟಿ ನಿಲ್ದಾಣದ ಬಳಿ ಮೆಟ್ರೋ ಮಾರ್ಗದ ಪಿಲ್ಲರ್‍ನಲ್ಲಿ ಕಾಣಿಸಿಕೊಂಡಿರುವ ಬಿರುಕು ಕುರಿತಂತೆ ದೆಹಲಿಯ ತಜ್ಞರು ಪರಿಶೀಲನೆ ನಡೆಸಿದ್ದು, ಯಾವುದೇ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಟ್ರಿನಿಟಿ ವೃತ್ತದ ಬಳಿ ಪಿಲ್ಲರ್ ಬಿರುಕು ಪರಿಶೀಲನೆಗೆ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಹಲಸೂರುವರೆಗೆ ಮೆಟ್ರೋ ರೈಲಿನಲ್ಲಿ ಸಂಚರಿಸಿ ವೀಕ್ಷಿಸಿದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಟ್ರಿನಿಟಿ ವೃತ್ತದಲ್ಲಿನ ಪಿಲ್ಲರ್‍ನಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದುರಸ್ತಿ ಕಾಮಗಾರಿ ನಡೆಸಲಾಗುತ್ತಿದೆ. ಕಾಮಗಾರಿಯಲ್ಲಿ ಯಾವುದೇ ದೋಷ ಕಂಡುಬಂದರೆ ತಕ್ಷಣ ಕ್ರಮ ವಹಿಸುವುದಾಗಿ ತಿಳಿಸಿದರು.

ದೆಹಲಿಯ ತಜ್ಞರ ತಂಡವು ಪರಿಶೀಲನೆ ನಡೆಸಿದ್ದು, ಪಿಲ್ಲರ್‍ನಲ್ಲಿ ಯಾವುದೇ ತೊಂದರೆ ಇಲ್ಲ. ಆತಂಕ ಬೇಡವೆಂದು ತಿಳಿಸಿದೆ ಎಂದು ಪರಮೇಶ್ವರ್ ಹೇಳಿದರು.

Facebook Comments