ರಾಜಕೀಯ ಬಿಕ್ಕಟಿನ ಬಳಿಕ ಮತ್ತೆ ಶ್ರೀಲಂಕಾ ಪ್ರಧಾನಿಯಾಗಿ ವಿಕ್ರಮಸಿಂಘೆ ಪ್ರಮಾಣವಚನ

ಈ ಸುದ್ದಿಯನ್ನು ಶೇರ್ ಮಾಡಿ

 Ranil Wickramasingheಕೊಲೊಂಬೊ, ಡಿ.15- ರನಿಲ್ ವಿಕ್ರಮಸಿಂಘೆ ನಾಳೆ ಶ್ರೀಲಂಕಾ ಪಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವರು. ವಿವಾದಿತ ಪ್ರಧಾನಿ ಮಹಿಂದಾ ರಾಜಪಕ್ಷೆ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ರನಿಲ್ ಮತ್ತೆ ಆ ಹುದ್ದೆಗೇರಲಿದ್ದಾರೆ. ದ್ವೀಪರಾಷ್ಟ್ರದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ನಡೆಯುತ್ತಿದ್ದ ಅಧಿಕಾರ ಕಚ್ಚಾಟಕ್ಕೆ ಅಂತಿಮ ತೆರೆ ಬೀಳಲಿದೆ.ಪದಚ್ಯುತರಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ಮತ್ತೆ ಕೂರಿಸಲು ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಸಮ್ಮತಿಸಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.

ಅಧ್ಯಕ್ಷರೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಕ್ರಮಸಿಂಘೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವರು ಎಂದು ಯುನೈಟೆಡ್ ನ್ಯಾಷನಲ್ ಪಾರ್ಟಿ-ಯುಎನ್‍ಪಿ ಉನ್ನತ ನಾಯಕರೊಬ್ಬರು ಹೇಳಿದ್ದಾರೆ.
ಶ್ರೀಲಂಕಾ ಅಧ್ಯಕ್ಷರು ಅಕ್ಟೋಬರ್ 26ರಂದು ನಡೆದ ಹಠಾತ್ ಬೆಳವಣಿಗೆಯೊಂದರಲ್ಲಿ ವಿಕ್ರಮಸಿಂಘೆ ಅವರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿ ಮಾಜಿ ರಾಷ್ಟ್ರಾಧ್ಯಕ್ಷ ರಾಜಪಕ್ಷೆ ಅವರನ್ನು ಆ ಹುದ್ದೆಗೆ ನೇಮಕ ಮಾಡಿದ್ದರು. ಇದರಿಂದ ದ್ವೀಪರಾಷ್ಟ್ರದಲ್ಲಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು.

Facebook Comments