ಕಾಂಗ್ರೆಸ್‍ನವರು ಹೇಳಿದಾಗ ಸಂಪುಟ ವಿಸ್ತರಣೆ: ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

cm03ಬೆಳಗಾವಿ, ಡಿ.18- ಸಂಪುಟ ವಿಸ್ತರಣೆಗೆ ನಾವು ತಯಾರಾಗಿದ್ದೇವೆ. ಕಾಂಗ್ರೆಸ್‍ನವರು ಹೇಳಿದಾಗ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 22ರಂದು ಸಂಪುಟ ವಿಸ್ತರಣೆ ಮಾಡುವುದಾಗಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಅದೇ ದಿನ ಸಂಪುಟ ವಿಸ್ತರಣೆ ಆಗಬಹುದು ಎಂದು ತಿಳಿಸಿದರು. ಸುಳ್ವಾಡಿ ದೇವಾಲಯದ ವಿಷಮಿಶ್ರಿತ ಪ್ರಸಾದ ದುರಂತದಲ್ಲಿ ಹಲವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ದುರಂತ ದಲ್ಲಿ ಸಂತ್ರಸ್ತರಾದ ಬಡವರ ಪ್ರಾಣ ಉಳಿಸಲು ವೈದ್ಯರು ಅಹರ್ನಿಷಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಇಂತಹ ಹೇಯಕೃತ್ಯ ನಡೆಸಿರುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ತಿಳಿಸಿದರು. ರಾಜ್ಯದ ಸಮ್ಮಿಶ್ರ ಸರ್ಕಾರ ದೇಶದಲ್ಲಿ ಹೊಸ ಬದಲಾವಣೆಗೆ ನಾಂದಿಯಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲೂ ಇದು ಮುಂದುವರಿಯಲಿದೆ ಎಂದು ಹೇಳಿದರು.
ಮುಂದಿನ ವರ್ಷವೂ ಶಾಲಾ ಮಕ್ಕಳಿಗೆ ಎರಡು ಜತೆ ಸಮವಸ್ತ್ರ ವಿತರಿಸುವುದಾಗಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಶೇ.30ರಷ್ಟು ಅನುದಾನವನ್ನು ಕಡಿತ ಮಾಡಿದೆ. ಹಾಗಾಗಿ ಕೆಲವು ಸೌಲಭ್ಯಗಳ ವಿತರಣೆಗೆ ತೊಂದರೆಯಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

Facebook Comments