ಪೂರ್ವವಿಭಾಗ ಪೊಲೀಸರ ಭರ್ಜರಿ ಬೇಟೆ 82.50 ಲಕ್ಷ ರೂ. ಮಾಲು ವಶ

ಈ ಸುದ್ದಿಯನ್ನು ಶೇರ್ ಮಾಡಿ

c policeಬೆಂಗಳೂರು, ಡಿ.19- ಪೂರ್ವ ವಿಭಾಗದ ಪೊಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಿ 82.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 3 ದ್ವಿಚಕ್ರ ವಾಹನ, ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಮಮೂರ್ತಿನಗರ ಠಾಣೆ ಪೊಲೀಸರು ಐದು ಮಂದಿಯನ್ನು ಬಂಧಿಸಿ 47.64 ಲಕ್ಷ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡರೆ, ಹೆಣ್ಣೂರು ಠಾಣೆ ಪೊಲೀಸರು ಕುಖ್ಯಾತ ಸರಗಳ್ಳನನ್ನು ಬಂಧಿಸಿ 15 ಲಕ್ಷ ಬೆಲೆಬಾಳುವ ಸರಗಳು ಹಾಗೂ ಸ್ಕೂಟರ್‍ಅನ್ನು ವಶಪಡಿಸಿಕೊಂಡಿದ್ದಾರೆ.
ಜೆಬಿ ನಗರ ಠಾಣೆ ಪೊಲೀಸರು ಐದು ಮಂದಿಯನ್ನು ಬಂಧಿಸಿ ಕನ್ನಗಳವು
ಪ್ರಕರಣಕ್ಕೆ ಸಂಬಂಧಿಸಿದಂತೆ 19.83 ಲಕ್ಷ ಬೆಲೆಬಾಳುವ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

Facebook Comments