ದಟ್ಟ ಮಂಜಿನಿಂದ ಸಂಭವಿಸಿದ ಅಪಘಾತದಲ್ಲಿ 7 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Fog-01
ಅಂಬಾಲ(ಹರ್ಯಾಣ), ಡಿ.29-ದಟ್ಟ ಮಂಜಿನಿಂದ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟು, ಇತರ ನಾಲ್ವರು ತೀವ್ರ ಗಾಯಗೊಂಡಿರುವ ಘಟನೆ ಹರ್ಯಾಣದ ಅಂಬಾಲದಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಅಂಬಾಲ-ಚಂಡಿಗಢ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳಿಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಇಬ್ಬರ ಸ್ಥಿತಿ ಶೋಚನೀಯವಾಗಿದೆ.

ದಟ್ಟ ಮಂಜು ಆವರಿಸಿದ್ದರಿಂದ ಮುಂದಿನ ದಾರಿ ಕಾಣದ ಕಾರಣ ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರೆಲ್ಲರೂ ಚಂಡಿಗಢದವರಾಗಿದ್ದಾರೆ.

ಕಳೆದ ಸೋಮವಾರ ಹರ್ಯಾಣದ ಜಾಝ್ಝರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜಿನಿಂದ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಎಂಟು ಮಂದಿ ಸಾವಿಗೀಡಾಗಿ ಅನೇಕರು ಗಾಯಗೊಂಡಿದ್ದರು. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದವು.

Facebook Comments

Sri Raghav

Admin