ಬಿಜೆಪಿಯವರು ಆಮಿಷ ಒಡ್ಡುತ್ತಿರುವುದು ನಿಜ : ಪುಟ್ಟರಾಜು

ಈ ಸುದ್ದಿಯನ್ನು ಶೇರ್ ಮಾಡಿ

puttarajuಮೈಸೂರು, ಜ.2-ಬಿಜೆಪಿಯವರು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡುತ್ತಿರುವುದು ನಿಜ ಎಂದು ಸಣ್ಣ ನೀರಾವರಿ ಖಾತೆ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಗರದ ಕೆಆರ್ ಆಸ್ಪತ್ರೆಗೆ ಭೇಟಿ ನೀಡಿ ಕುಕ್ಕರ್ ಸಿಡಿದು ಗಾಯಗೊಂಡ ಬಾಲಕಿಯ ಆರೋಗ್ಯ ವಿಚಾರಿಸಿದ ನಂತರ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಸಮರ್ಥಿಸಿಕೊಂಡರು. ಶಸಕ ರಮೇಶ್ ಜಾರಕಿಹೊಳಿ ಎಲ್ಲಿಯೂ ಹೋಗಿಲ್ಲ. ಬಿಜೆಪಿಯೊಂದಿಗೆ ಹೋಗುತ್ತಾರೆಂಬುದು ಶುದ್ಧ ಸುಳ್ಳು ಎಂದು ಪ್ರಶ್ನೆಯೊಂದಕ್ಕೆ ಪುಟ್ಟರಾಜು ಪ್ರತಿಕ್ರಿಯಿಸಿದರು.

Facebook Comments