ಕಾಲೇಜು ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

crimeಬೆಂಗಳೂರು, ಜ.9- ಕಾಲೇಜು ಸಮೀಪ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿ 1 ಲಕ್ಷ ಬೆಲೆಬಾಳುವ 4 ಕೆಜಿ ಗಾಂಜಾ ಮತ್ತು 1 ಕಾರನ್ನು ವಶಪಡಿಸಿಕೊಂಡಿದ್ದಾರೆ. ತಾವರೆಕೆರೆ ಪಾರ್ಕ್ ಬಳಿಯ ಬಿಇಟಿ ಕಾಲೇಜು ಸಮೀಪ ಮಾದಕ ವಸ್ತು ಗಾಂಜಾವನ್ನು ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಈ ಆಧಾರದ ಮೇಲೆ ಪೊಲೀಸರು ಸ್ಥಳಕ್ಕೆ ತೆರಳಿ ಮಡಿವಾಳ ನಿವಾಸಿ ಮಂಜುನಾಥ (30) ಎಂಬಾತನನ್ನು ಬಂಧಿಸಿದ್ದಾರೆ.

ಈತ ಮೈಸೂರಿನಲ್ಲಿರುವ ಸ್ನೇಹಿತ ಆನಂದ್ ಎಂಬಾತನಿಂದ ಗಾಂಜಾ ಖರೀದಿಸಿ ಪ್ಯಾಕ್ ಮಾಡಿ ಬೆಂಗಳೂರಿಗೆ ತನ್ನ ಸ್ವಂತ ಕಾರಿನಲ್ಲಿ ತಂದು ವಿವಿಧೆಡೆ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದುದು ವಿಚಾರಣೆಯಿಂದ ತಿಳಿದುಬಂದಿದೆ. ಆಗ್ನೇಯ ವಿಭಾಗದ ಉಪ ಪೊಲೀಸ್ ಕಮಿಷನರ್ ಡಾ.ಬೋರ ಲಿಂಗಯ್ಯ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

Facebook Comments