ಸಂಕ್ರಾಂತಿ ಹಬ್ಬಕ್ಕೆ 500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್

ಈ ಸುದ್ದಿಯನ್ನು ಶೇರ್ ಮಾಡಿ

KSRTC--01

ಬೆಂಗಳೂರು, ಜ.11- ಮಕರ ಸಂಕ್ರಾಂತಿಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ನಗರದಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ಈ ಹೆಚ್ಚುವರಿ ಬಸ್ ಸೇವೆ ಇರುತ್ತದೆ.

ಮೈಸೂರುರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಕಡೆ ಸಂಚಾರಿಸಲಿವೆ.
ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್‍ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಪ್ರಾರಂಭಿಸಿವೆ.

ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐಗೇಟ್, ಗಂಗಾನಗರ, ಕೆಂಗೇರಿ ಉಪನಗರ ಸೇರಿದಂತೆ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆಕಲ್ಪಿಸಲಾಗಿದೆ.

ಇ-ಟಿಕೇಟ್ ಬುಕ್ಕಿಂಗ್‍ನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಪ್ರಯಾಣಿಕರು ರಾಜ್ಯ ಹಾಗೂ ಅಂತಾರಾಜ್ಯದಲ್ಲಿರುವ 707 ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.  ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರುಒಟ್ಟಾಗಿ ಮುಂಗಡಟಿಕೇಟು ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣದರದಲ್ಲಿ ಶೇ.10ರಷ್ಟುರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Facebook Comments

Sri Raghav

Admin