ಆನಂದ್‍ಸಿಂಗ್, ನಾಗೇಂದ್ರ ವಿಚಾರಣೆಗೆ ಹಾಜರ್

ಈ ಸುದ್ದಿಯನ್ನು ಶೇರ್ ಮಾಡಿ

Anand Singh, Nagendraಬೆಂಗಳೂರು, ಜ.11- ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಶಾಸಕರಾದ ಆನಂದ್‍ಸಿಂಗ್, ನಾಗೇಂದ್ರ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾದರು.  ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಅದಿರು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದ್‍ಸಿಂಗ್, ನಾಗೇಂದ್ರ ಅವರಿಗೆ ವಿಶೇಷ ನ್ಯಾಯಾಲಯ ಕೋರ್ಟ್ ಗೆ ಹಾಜರಾಗಬೇಕೆಂದು ವಾರೆಂಟ್ ಜಾರಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ನಮ್ಮ ಕಕ್ಷಿದಾರರು ಜನಪ್ರತಿನಿಧಿಗಳಾಗಿರುವುದರಿಂದ ಎಲ್ಲ ಸಮಯದಲ್ಲಿ ಕೋರ್ಟ್‍ಗೆ ಹಾಜರಾಗಲು ಸಾಧ್ಯವಿಲ್ಲ. ವಿನಾಯಿತಿ ನೀಡಬೇಕೆಂದು ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.

ವಿಚಾರಣೆಯನ್ನು ಜ.16ಕ್ಕೆ ಮುಂದೂಡಿತು. ನಿನ್ನೆಯಷ್ಟೆ ನ್ಯಾಯಾ ಧೀಶರು ಖುದ್ದು ವಿಚಾರಣೆಗೆ ಹಾಜರಾಗ ಬೇಕೆಂದು ಕಟ್ಟಪ್ಪಣೆ ಮಾಡಿದ್ದರು.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಕುರಿತ ವಿಚಾರಣೆಗೆ ಸತತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಾಸಕರಾದ ಆನಂದ್‌ ಸಿಂಗ್‌ ಮತ್ತು ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿತ್ತು.

Facebook Comments