ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಅಪ್ಪ-ಮಗ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

car 0ರಾಯಚೂರು, ಜ.11- ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಸಿಂಧನೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಹನೀಫ್‍ಖುರೇಷಿ (60) ಮತ್ತು ಅಬ್ದುಲ್ಲಾ (16) ಮೃತಪಟ್ಟ ಅಪ್ಪ-ಮಗ.

ಇಂದು ಬೆಳಗ್ಗೆ ರಾಯಚೂರು ಜಿಲ್ಲೆ ಸಿಂಧನೂರಿಗೆ ಕಾರಿನಲ್ಲಿ ನಾಲ್ಕು ಮಂದಿ ಹೋಗುತ್ತಿದ್ದಾಗ ಚಾಲಕನ ನಿರ್ಲಕ್ಷ್ಯ ಹಾಗೂ ಅಜಾಗರೂಕತೆ ಚಾಲನೆಯಿಂದಾಗಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಹಿತಕರ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು, ಇವರನ್ನು ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments