ಪತ್ರಕರ್ತನ ಹತ್ಯೆ ಪ್ರಕರಣದಲ್ಲಿಯೂ ಡೋಂಗಿ ಬಾಬಾ ಗುರ್‍ಮಿತ್ ದೋಷಿ..!

ಈ ಸುದ್ದಿಯನ್ನು ಶೇರ್ ಮಾಡಿ

Gurmit-Ram-Rahim
ಚಂಡೀಗಢ, ಜ.11- ಡೇರಾ ಸಚ್ಚಾ ಸೌಧ್ ಮುಖ್ಯಸ್ಥ ಗುರ್‍ಮಿತ್ ರಾಮ್ ರಹೀಮ್ ಸಿಂಗ್ ಆರೋಪಿಯಾಗಿರುವ ಪತ್ರಕರ್ತ ರಾಮಚಂದ್ರ ಛತ್ರಪತಿ ಹತ್ಯೆ ಪ್ರಕರಣದ ತೀರ್ಪು ಹೊರಬಿದಿದ್ದದೆ.

ಈ ಪ್ರಕರಣದಲ್ಲಿ ಬಾಬಾ ಮತ್ತು ಇತರ ಮೂವರು ದೋಷಿಗಳೆಂದು ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಿದೆ. ದೋಷಿಗಳ ಶಿಕ್ಷೆ ಪ್ರಮಾಣವನ್ನು ಜ.17ರಂದು ನ್ಯಾಯಾಲಯ ಪ್ರಕಟಿಸಲಿದೆ. ಈಗಾಗಲೇ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಬಾಗೆ ಈ ಪ್ರಕರಣದಲ್ಲೂ ಸೆರೆಮನೆ ವಾಸ ಖಚಿತ.

ತೀರ್ಪಿನ ಹಿನ್ನೆಲೆಯಲ್ಲಿ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪೂರಾ ಸಚ್ ಎಂಬ ಪತ್ರಿಕೆಯಲ್ಲಿ ರಾಮಚಂದ್ರ ಛತ್ರಪತಿ ಆಶ್ರಮದಲ್ಲಿ ನಡೆಯುತ್ತಿದ್ದ ಅವ್ಯವಹಾರ ಮತ್ತು ಲೈಂಗಿಕ ಕಿರುಕುಳದ ಬಗ್ಗೆ ವಿಸ್ತೃತ ವರದಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ 2002ರಲ್ಲಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಬಾಬಾ ರಾಮ್ ರಹೀಮ್ ಸಿಂಗ್ ಪ್ರಮುಖ ಆರೋಪಿ. ಮುನ್ನೆಚ್ಚರಿಕೆ ಕ್ರಮವಾಗಿ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿರುವ ಡೇರಾ ಸಚ್ಚಾ ಸೌಧ್ ಮತ್ತು ಇನ್ನಿತರ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆಪಾದನೆಗಾಗಿ ಕಳೆದ ವರ್ಷ ಆಗಸ್ಟ್‍ನಲ್ಲಿ ರಾಮ್ ರಹೀಮ್‍ಸಿಂಗ್‍ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಎರಡು ರಾಜ್ಯಗಳಲ್ಲಿ ಭುಗಿಲೆದ್ದ ವ್ಯಾಪಕ ಹಿಂಸಾಚಾರಕ್ಕೆ 40 ಮಂದಿ ಬಲಿಯಾಗಿ ಅನೇಕರು ಗಾಯಗೊಂಡಿದ್ದರು.

Facebook Comments

Sri Raghav

Admin