ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

 Nikhil Kumaraswamyಮಂಡ್ಯ, ಜ.11- ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕೆಂಬ ಒಕ್ಕೊರಲ ಒತ್ತಾಯ ಕೇಳಿಬಂದಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ನಾಗರತ್ನ ಅವರ ನೇತೃತ್ವದಲ್ಲಿ ಜೆಡಿಎಸ್ ಸದಸ್ಯರು ಪ್ರವಾಸ ಮಂದಿರದಲ್ಲಿ ಸಬೆ ನಡೆಸಿ ನಿಖಿಲ್ ಅವರನ್ನೇ ಲೋಕಸಭೆ ಚುನಾವಣೆಗೆ ಕಣಕ್ಕಿಳಿಸಬೇಕೆಂದು ಆಗ್ರಹಪಡಿಸಿದ್ದಾರೆ.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಜಿಲ್ಲಾ ಪಂಚಾಯತ್‍ನಲ್ಲೂ ಜೆಡಿಎಸ್‍ನವರೇ ಇದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೇ ಟಿಕೆಟ್ ಕೊಡಬೇಕೆಂದು ಜೆಡಿಎಸ್ ಸದಸ್ಯರು ಒತ್ತಾಯಿಸಿದ್ದಾರೆ.
ಈ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ವಿಶ್ವನಾಥ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

Facebook Comments