‘ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರದ ವಿರುದ್ಧ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು

ಈ ಸುದ್ದಿಯನ್ನು ಶೇರ್ ಮಾಡಿ

Accidental Prime Ministerಕೋಲ್ಕತ್ತಾ, ಜ.12- ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜೀವನಾಧಾರಿತ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಸಿನಿಮಾದಲ್ಲಿ ಡಾ.ಸಿಂಗ್ ಮತ್ತು ಕಾಂಗ್ರೆಸ್ ನಾಯಕರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಪಕ್ಷದ ಕಾರ್ಯಕರ್ತರು ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದರಿಂದ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ. ಈ ಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದಿದೆ. ಚಿತ್ರ ಪ್ರದರ್ಶನವಾಗುತ್ತಿದ್ದ ಕೋಲ್ಕತ್ತಾದ  ಮಲ್ಟಿಪ್ಲೆಕ್ಸ್‍ ಮೇಲೆ ಪಶ್ಚಿಮ ಬಂಗಾಳದ ಯುವ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಸಿನಿಮಾ ವೀಕ್ಷಿಸದಂತೆ ಚಿತ್ರಮಂದಿರಕ್ಕೆ ಆಗಮಿಸಿದ್ದ ಜನರಿಗೆ ಎಚ್ಚರಿಸಿ, ಈ ಕೂಡಲೇ ಸ್ಥಳದಿಂದ ತೆರಳುವಂತೆ ಸೂಚಿಸಿದರು. ನಮ್ಮ ಪಕ್ಷದ ಹಿರಿಯ ನಾಯಕರಿಗೆ ಸಿನಿಮಾದಲ್ಲಿ ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಿತ್ರದಲ್ಲಿ ಕಾಂಗ್ರೆಸ್‍ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ತೇಜೋವಧೆ ಮಾಡಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಅಲ್ಲದೆ, ಸಿನಿಮಾ ಪ್ರದರ್ಶನಕ್ಕೆ ಎಲ್ಲೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

Facebook Comments