ಕಾಶ್ಮೀರದಲ್ಲಿ ಉಗ್ರರಿಂದ ಸ್ಫೋಟ : ಸೇನಾಧಿಕಾರಿ ಸೇರಿ ಇಬ್ಬರು ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

soldierಶ್ರೀನಗರ, ಜ.12- ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಾಕಿಸ್ತಾನಿ ಬೆಂಬಲಿತ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿದೆ.  ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲಾಯ ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಶಂಕಿತ ಉಗ್ರರು ಸುಧಾರಿತ ಸ್ಫೋಟಕವೊಂದನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ಸೇನಾ ಮೇಜರ್ ಹಾಗೂ ಯೋಧ ಹುತಾತ್ಮರಾಗಿದ್ದಾರೆ.

ರಜೌರಿ ಜಿಲ್ಲಾಯ ನೌಷೆರಾ ಸೆಕ್ಟರ್‍ನಲ್ಲಿ ಶಂಕಿತ ಉಗ್ರರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಎಲ್‍ಒಸಿ ಬಳಿ ಇರುವ ಕಾಲುದಾರಿಯಲ್ಲಿ ಸುಧಾರಿತ ಸ್ಫೋಟಕ ಬಾಂಬ್ (ಐಇಡಿ) ಫಿಕ್ಸ್ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದಲ್ಲಿ ಮೇಜರ್ ಸೇರಿದಂತೆ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Facebook Comments