‘ರಾಜ್ಯದಲ್ಲಿ ಬಡತನ ನಿರ್ಮೂಲನೆಯಾಬೇಕಾದರೆ ಮದ್ಯ ನಿಷೇಧವಾಗಬೇಕು’

ಈ ಸುದ್ದಿಯನ್ನು ಶೇರ್ ಮಾಡಿ

raviಹಿರಿಯೂರು , ಜ.12- ಬಡವರು ನೆಮ್ಮದಿಯ ಜೀವನ ಸಾಗಿಸಬೇಕಾದರೆ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಜಾರಿಯಾಗಬೇಕು ಎಂದು ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದರು.

ನಗರದ ಭೀಮನಬಂಡೆ ಬಳಿಯ ಯಜ್ಞವಲ್ಕ್ಯ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಅನುದಾನರಹಿತ ಖಾಸಗಿ ಶಾಲಾ ಆಡಳಿತಮಂಡಳಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಕ್ಕೆ ಸರ್ಕಾರವನ್ನು ಒತ್ತಾಯಿಸಿ, ಮದ್ಯನಿಷೇಧ ಆಂದೋಲನದ ವತಿಯಿಂದ ಇದೇ ಜನವರಿ 19ರಂದು ಚಿತ್ರದುರ್ಗ ನಗರದಿಂದ ಸಾವಿರಾರು ಮಹಿಳೆಯರೊಂದಿಗೆ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ರೈತಮುಖಂಡ ಲಿಂಗೇಗೌಡ, ರೈತ ಹೋರಾಟಗಾರ ಕಸವನಹಳ್ಳಿ ರಮೇಶ್, ಯಜ್ಞವಲ್ಕ್ಯ ವಿದ್ಯಾಸಂಸ್ಥೆ ಅಧ್ಯಕ್ಷ ಸುರೇಶ್, ವಾಣಿವಿಲಾಸ ವಿದ್ಯಾಸಂಸ್ಥೆ ಕಾರ್ಯರ್ಶಿ ಆಲೂರು ಹನುಮಂತರಾಯಪ್ಪ, ಮೋಕ್ಷಗುಂಡಂ ವಿದ್ಯಾಸಂಸ್ಥೆ ಅಧ್ಯಕ್ಷ ಜಗದೀಶ್‍ದರೇದರ್, ಕಾರ್ಯದರ್ಶಿ ವೀರಭದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

Facebook Comments