‘ಪ್ರಧಾನಿ ಮೋದಿಯನ್ನು ಏಕಾಂಗಿಯಾಗಿ ಎದುರಿಸಲು ಕಾಂಗ್ರೆಸ್ ಸಮರ್ಥವಿಲ್ಲ’

ಈ ಸುದ್ದಿಯನ್ನು ಶೇರ್ ಮಾಡಿ

AK Antonyತಿರುವನಂತಪುರಂ, ಜ.12- ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕಾಂಗಿಯಾಗಿ ಎದುರಿಸಲು ಕಾಂಗ್ರೆಸ್ ಸಮರ್ಥವಿಲ್ಲ ಎಂಬ ಪಕ್ಷದ ಹಿರಿಯ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಎ.ಕೆ.ಆ್ಯಂಟನಿ ಅವರ ಹೇಳಿಕೆ ಹೈಕಮಾಂಡ್‍ನಲ್ಲಿ ತೀವ್ರ ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿದೆ.

ತಿರುವನಂತಪುರದಲ್ಲಿ ನಿನ್ನೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಆ್ಯಂಟನಿ, ಮೋದಿಯನ್ನು ಏಕಾಂಗಿಯಾಗಿ ಎದುರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಕಾಂಗ್ರೆಸ್ ಶಕ್ತವಾಗಿಲ್ಲ ಎಂಬುದನ್ನು ಪಕ್ಷ ಅರ್ಥಮಾಡಿಕೊಂಡಿದೆ. ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಪರಾಭವಗೊಳಿಸಬಹುದಾಗಿದೆ ಎಂದು ಅವರು ಹೇಳಿದರು.

ಅವರ ಈ ಹೇಳಿಕೆ ಈಗ ಕಾಂಗ್ರೆಸ್ ವರಿಷ್ಠ ಮಂಡಳಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಇಂತಹ ಹೇಳಿಕೆಗಳನ್ನು ಬಹಿರಂಗವಾಗಿ ನೀಡದಂತೆ ಹೈಕಮಾಂಡ್ ಸದ್ಯದಲ್ಲೇ ಸುತ್ತೋಲೆ ಹೊರಡಿಸುವ ನಿರೀಕ್ಷೆ ಇದೆ.

ರಾಹುಲ್‍ಗಾಂಧಿ ಅವರ ಸಾಮಥ್ರ್ಯವನ್ನು ಪ್ರಶಂಸಿಸಿರುವ ಆ್ಯಂಟನಿ, ಮೋದಿ ವಿರುದ್ಧ ಪ್ರಬಲ ನಾಯಕರಾಗಿ ರಾಹುಲ್ ಹೊರಹೊಮ್ಮಿದ್ದಾರೆ. ಆದಾಗ್ಯೂ ಕೋಮುವಾದಿ ಪಕ್ಷ ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಲು ಇತರ ಪಕ್ಷಗಳೊಂದಿಗೆ ಮೈತ್ರಿ ಮತ್ತು ಹೊಂದಾಣಿಕೆ ಅನಿವಾರ್ಯ ಎಂದು ಆ್ಯಂಟನಿ ಹೇಳಿದರು.

Facebook Comments