ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಸುಪ್ರೀಂ ಬಡ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Justice Dinesh Maheshwariನವದೆಹಲಿ, ಜ.12- ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್‍ನ ಕೊಲೀಜಿಯಂ (ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರುಗಳ ಮಂಡಳಿ) ಶಿಫಾರಸು ಮಾಡಿದೆ.

ಜ.10ರಂದು ನಡೆದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐವರು ಸದಸ್ಯರನ್ನೊಳಗೊಂಡ ಕೊಲೀಜಿಯಂ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೈಕೋರ್ಟ್ ನ್ಯಾಯಮೂರ್ತಿಗಳ ಹಿರಿತನ ಪಟ್ಟಿಯಲ್ಲಿ ನ್ಯಾ. ದಿನೇಶ್ ಮಹೇಶ್ವರಿ ಅವರು 21ನೆ ಸ್ಥಾನದಲ್ಲಿದ್ದರೆ, ನ್ಯಾ. ಸಂಜೀವ್ ಖನ್ನಾ ಅವರು 33ನೆ ಸ್ಥಾನದಲ್ಲಿದ್ದಾರೆ.

ಸರ್ವೋಚ್ಚ ನ್ಯಾಯಾಲಯದಲ್ಲಿ ಸದ್ಯಕ್ಕೆ ಐವರು ನ್ಯಾಯಮೂರ್ತಿಗಳ ಸ್ಥಾನ ಖಾಲಿ ಇದ್ದು, ಇವರಲ್ಲಿ ಇಬ್ಬರನ್ನು ತುಂಬಿಸಿಕೊಳ್ಳಲು ಕೊಲೀಜಿಯಂ ನಿರ್ಧರಿಸಿದೆ.

Facebook Comments