ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಶಾಸಕ ಅರಗ ಜ್ಞಾನೇಂದ್ರ ಅವಾಜ್, ವಿಡಿಯೋ ವೈರಲ್ ..!

ಈ ಸುದ್ದಿಯನ್ನು ಶೇರ್ ಮಾಡಿ

Agara-Jananedra--01

ಶಿವಮೊಗ್ಗ, ಜ.12-ಜಿಲ್ಲೆಯಲ್ಲಿ ಜನಪ್ರತಿನಿಧಿಗಳ ದರ್ಪ, ದಬ್ಬಾಳಿಕೆ ಹೆಚ್ಚಾಗಿದೆ. ಭದ್ರಾವತಿ ಶಾಸಕರಾದ ಬಿ.ಕೆ.ಸಂಗಮೇಶ್, ಅರಣ್ಯಾಧಿಕಾರಿಯೊಬ್ಬರಿಗೆ ಬೆದರಿಕೆ ಹಾಕಿದ್ದ ಬೆನ್ನಲ್ಲೇ, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಅವರು ತಹಶೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ವಿಡಿಯೋವೊಂದು ವೈರಲ್ ಆಗಿದೆ.

ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಕೆಲಸ ಮಾಡಿಕೊಡುತ್ತಿಲ್ಲ ಎಂದು ಸಿಟ್ಟಿಗೆದ್ದ ಶಾಸಕ ಅರಗ ಜ್ಞಾನೇಂದ್ರ ಅವರು ತಾಲೂಕು ಕಚೇರಿಯಲ್ಲಿಯೇ ಅವಾಚ್ಯ ಶಬ್ದಗಳಿಂದ ಅಧಿಕಾರಿಗಳನ್ನು ನಿಂದಿಸಿದ್ದಾರೆ. ಇವರು ಅಧಿಕಾರಿಗಳ ಮೇಲೆ ದರ್ಪ ತೋರಿರುವುದು ಮೊದಲೇನಲ್ಲ. ಹಿಂದೆಯೂ ಪಿಡಿಒ ಮೇಲೆ ಕೂಡ ಈ ರೀತಿ ದರ್ಪ ತೋರಿದ್ದರು ಎನ್ನಲಾಗಿದೆ.

ಸರ್ಕಾರಿ ಅಧಿಕಾರಿಗಳ ಮೇಲೆ ಜನಪ್ರತಿನಿಧಿಗಳ ಈ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅವಾಚ್ಯ ಶಬ್ಧಗಳಿಂದ ಅಧಿಕಾರಿಗಳನ್ನು ನಿಂದಿಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಅರಗ ಜ್ಞಾನೇಂದ್ರ ಅವರು ಸಾರ್ವಜನಿಕವಾಗಿ ನೀಡಿದ ಹೇಳಿಕೆಯಿಂದ ಯಾರಿಗಾದರೂ ನೋವಾದಲ್ಲಿ ಈ ಹೇಳಿಕೆ ವಾಪಸ್ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ನಾನು ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಜನರ ಕೆಲಸಗಳು ಆಗುತ್ತಿಲ್ಲ. ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇನೆ. ಯಾರಿಗೂ ನೋವು ತರುವ ಉದ್ದೇಶ ನನ್ನದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ ಈ ವೇಳೆಗಾಗಲೇ ಅವರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಜಡ್ಡುಗಟ್ಟಿರುವ ಅಧಿಕಾರಿ ವರ್ಗಗಳಿಂದ ಸ್ವಲ್ಪ ದರ್ಪದಿಂದಲೇ ಕೆಲಸ ಮಾಡಿಸಬೇಕು. ಆದರೆ ಮನಬಂದಂತೆ ಮಾತನಾಡುವುದು ಎಷ್ಟು ಸಮಂಜಸ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

Facebook Comments

Sri Raghav

Admin