ದೆಹಲಿ ಸಿಎಂ ಕೇಜ್ರಿವಾಲ್ ಪುತ್ರಿಯನ್ನು ಕಿಡ್ನಾಪ್ ಮಾಡುವುದಾಗಿ ಬೆದರಿಕೆ..!

ಈ ಸುದ್ದಿಯನ್ನು ಶೇರ್ ಮಾಡಿ

Arvind-Kejriwal

ನವದೆಹಲಿ, ಜ.13- ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಗಳನ್ನು ಅಪಹರಿಸುವುದಾಗಿ ಅಪರಿಚಿತರಿಂದ ಬೆದರಿಕೆ ಕರೆ ಬಂದಿದೆ. ಕೇಜ್ರಿವಾಲ್ ಕಚೇರಿಗೆ ಬಂದಿರುವ ಇ-ಮೇಲ್‍ನಲ್ಲಿ ಅವರ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಜ.9ರಂದು ಬಂದಿರುವ ಬೆದರಿಕೆ ಇ- ಮೇಲ್‍ನನ್ನು ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನ್ನಾಯಕ್ ಅವರಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆದರಿಕೆ ಕರೆ ಬಂದಿರುವುದನ್ನು ದೆಹಲಿ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದು, ಅದನ್ನು ಸೈಬರ್ ಅಪರಾಧ ತನಿಖಾ ವಿಭಾಗದ ವಿಶೇಷ ಘಟಕ್ಕೆ ವರ್ಗಾಯಿಸಲಾಗಿದೆ. ಯಾವ ಇ- ಮೇಲ್ ಖಾತೆಯಿಂದ ಈ ಕರೆ ಬಂದಿದೆ ಎಂಬುದನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ. ಉತ್ತರ ಜಿಲ್ಲೆಯ ಪೊಲೀಸರಿಂದ ಕೇಜ್ರಿವಾಲ್ ಮಗಳಿಗೆ ಭದ್ರತೆ ಒದಗಿಸಲಾಗಿದೆ.

ಮೂರು ದಿನಗಳ ಹಿಂದೆಯೇ ದೆಹಲಿ ಸರ್ಕಾರ ಬೆದರಿಕೆಯ ಇ- ಮೇಲ್ ಅನ್ನು ಪೊಲೀಸ್ ಆಯುಕ್ತರಿಗೆ ವರ್ಗಾಯಿಸಿರುವುದಾಗಿ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರಿಂದ ಈವರೆಗೂ ಯಾವುದೇ ಮಾಹಿತಿ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯ ಎಂಬ ಸಂಶಯವಿದ್ದು, ತನಿಖೆ ತೀವ್ರಗೊಳಿಸಿರುವ ಪೊಲೀಸರು ಎಲ್ಲಾ ಆಯಾಮಗಳಿಂದ ವಿಚಾರಣೆ ನಡೆಸುತ್ತಿದ್ದಾರೆ.

Facebook Comments

Sri Raghav

Admin