ಅಕ್ರಮ ಮದ್ಯ ಮಾರಾಟ : ಇಬ್ಬರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Druge-Smagguers-arrestedಶಿವಮೊಗ್ಗ, ಜ.14- ಪ್ರತ್ಯೇಕ ಘಟನೆಗಳಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಹಾಗೂ ಸಾಗರ ತಾಲೂಕಿನಲ್ಲಿ ನಡೆದಿದೆ.

ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಗಸವಳ್ಳಿ ಹೊಸೂರು ಗ್ರಾಮದ ಟೀ ಅಂಗಡಿಯೊಂದರ ಮುಂಭಾಗ ಮದ್ಯ ಮಾರಾಟ ನಡೆಸುತ್ತಿದ್ದ ಆರೋಪದ ಮೇರೆಗೆ ರಾಜು (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 181 ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಳಿಗಾರು ಗ್ರಾಮದ ಹೋಟೆಲ್ವೊಂದರ ಮುಂಭಾಗ ಕಾನೂನುಬಾಹಿರವಾಗಿ ಮದ್ಯ ಮಾರಾಟ ನಡೆಸುತ್ತಿದ್ದ ಆರೋಪದ ಮೇರೆಗೆ ನೀಲಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿ 6336 ರೂ. ಮೌಲ್ಯದ ಮದ್ಯವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Facebook Comments