ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

supreme-ocurtನವದೆಹಲಿ, ಜ.14(ಪಿಟಿಐ)- ಯಾವುದೇ ಕಂಪ್ಯೂಟರ್ ಮೇಲೆ ನಿಗಾ ವಹಿಸಲು ಮತ್ತು ಅವುಗಳ ಮಾಹಿತಿಯನ್ನು ಕಲೆ ಹಾಕಲು 10 ಸರ್ಕಾರಿ ಸಂಸ್ಥೆಗಳಿಗೆ ಆದೇಶ ನೀಡಿರುವ ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ವ್ಯಾಪಕ ಟೀಕೆ ಮತ್ತು ಅಸಮಾಧಾನ ವ್ಯಕ್ತವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೇರೆಗೆ ಸುಪ್ರೀಂಕೋರ್ಟ್ ಇಂದು ನೋಟಿಸ್ ಜಾರಿ ಮಾಡಿ ಆರು ವಾರಗಳೊಳಗೆ ಪ್ರತ್ಯುತ್ತರ ನೀಡುವಂತೆ ಸೂಚಿಸಿದೆ.

ಕೇಂದ್ರ ಸರ್ಕಾರದ ಈ ಕ್ರಮದಿಂದ ಖಾಸಗಿತನ ಹಕ್ಕಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್‍ಗೋಗಯ್ ನೇತೃತ್ವದ ಪೀಠ ಇಂದು ವಿಚಾರಣೆ ನಡೆಸಿತು.

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಇದಕ್ಕೆ ಇನ್ನು ಆರು ವಾರಗಳಲ್ಲಿ ಪ್ರತ್ಯುತ್ತರ ನೀಡಬೇಕೆಂದು ನಿರ್ದೇಶನ ನೀಡಿದೆ.

Facebook Comments