ಗ್ಯಾಸ್ ರೀಫಿಲ್ಲಿಂಗ್ ವೇಳೆ ಅವಘಡ ಇಬ್ಬರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Gas-Regulatorಬೆಂಗಳೂರು, ಜ.14- ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾಗ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆಯಲ್ಲಿ ಸಂತೋಷ್(19) ಮತ್ತು ಅಂಜಿ(22) ಗಾಯ ಗೊಂಡಿದ್ದು, ಇವರನ್ನು ವಿಕ್ಟೋ ರಿಯಾ ಆಸ್ಪತ್ರೆಗೆ ದಾಖಲಿಸ ಲಾಗಿದೆ.

ವರದರಾಜು ಲೇಔಟ್‍ನ 8ನೇ ಬಿ ಕ್ರಾಸ್‍ನಲ್ಲಿರುವ ಅಂಗಡಿ ಯೊಂದರಲ್ಲಿ ನಿನ್ನೆ ಮಧ್ಯಾಹ್ನ 3.30ರ ಸಮಯದಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಇವರಿಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಅಮೃತಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments