ಫೆ. 13ರಂದು ರೈತರಿಂದ ವಿಧಾನ ಸೌಧಕ್ಕೆ ಮುತ್ತಿಗೆ

ಈ ಸುದ್ದಿಯನ್ನು ಶೇರ್ ಮಾಡಿ

hubaliಹುಬ್ಬಳ್ಳಿ,ಜ.13- ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾದ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಫೆ. 13ರಂದು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಎ. ಲಕ್ಷ್ಮೀನಾರಾಯಣಗೌಡ ಹೇಳಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ರೈತರ ಆಶೋತ್ತರಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದರು.

ವಿಶ್ವ ರೈತ ನಾಯಕ ಪ್ರೋ. ಎಂ.ಸಿ. ನಂಜುಂಡಸ್ವಾಮಿಯವರ ಜನ್ಮ ದಿನದಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಮಹದಾಯಿ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ನ್ಯಾಯಾಧೀಕರಣದ ತೀರ್ಪಿನ ಅನ್ವಯ ಮಲಪ್ರಭೆಗೆ ನೀರು ಹರಿಸಬೇಕು.

ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು, ಬರಗಾಲದಿಂದ ರೈತರ ಬೆಳೆಗಳು ನಾಶವಾಗಿದ್ದು, ಬೆಳೆ ಹಾನಿಯನ್ನು ಕೇಂದ್ರದ ನಿಯಮಾವಳಿ ಪ್ರಕಾರ ಬಿಡುಗಡೆ ಮಾಡಬೇಕು. ಫಸಲ್ ಭೀಮಾ ಯೋಜನೆಯಲ್ಲಿನ ನ್ಯೂನತೆ ಸರಿಪಡಿಸಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಖರೀದಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಎಲ್ಲಾ ಪ್ರದೇಶಗಳಿಗೆ ಮುಟ್ಟಿಸುವ ಕೆಲಸವಾಗಬೇಕು ಎಂದು ಸರ್ಕಾರಗಳಿಗೆ ಒತ್ತಾಯಿಸಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಪುಟ್ಟಯ್ಯ ಟಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸೈಯದ್ ಖದೀರ್ ಉಪಸ್ಥಿತರಿದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )