ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸಚಿವ ಡಿ.ಸಿ.ತಮ್ಮಣ್ಣ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

DC Thammannaಶಿವಮೊಗ್ಗ, ಜ.14-ಪ್ರಸ್ತುತ ವರ್ಷ ಸಾಗರ ತಾಲೂಕು ವ್ಯಾಪ್ತಿಯಲ್ಲಿ 150 ಮಂದಿ ಯಲ್ಲಿ ಮಂಗನ ಕಾಯಿಲೆ ರೋಗಲಕ್ಷಣಗಳು ಕಾಣಿಸಿ ಕೊಂಡಿದ್ದು, 60 ಮಂದಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿ ರುವುದು ದೃಢಪಟ್ಟಿದ್ದು,ಇವರ ಪೈಕಿ ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.

ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗನ ಕಾಯಿಲೆ ಸಮರ್ಪಕವಾಗಿ ನಿಯಂತ್ರಿಸಲು ಜಿಲ್ಲಾಧಿಕಾರಿ ಯವರಿಗೆ ಸೂಚನೆ ನೀಡಲಾಗಿದ್ದು ಅವರೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದೆನೆ ಎಂದು ಹೇಳಿದರು.

ಜಿಲ್ಲಾಧಿಕಾರಿಯವರು ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಸೇರಿದಂತೆ ಸಂಬಂಧಪಟ್ಟ ಇಲಾಖೆ ಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೀಗ ಮಂಗನ ಕಾಯಿಲೆ ಸಾವಿನ ಪ್ರಕರಣ ಕಡಿಮೆಯಾಗುತ್ತಿದೆ ಎಂದರು.ಮೆಗ್ಗಾನ್ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ರೋಗಿಗಳನ್ನು ಮಣಿಪಾಲ ಆಸ್ಪತ್ರೆಗೆ ಕಳುಹಿಸಲು ಸೂಚನೆ ನೀಡಲಾಗಿದೆ.

ಸಾಗರದಲ್ಲಿ ವೆಂಟಿಲೇಟರ್ ವ್ಯವಸ್ಥೆ ಇಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಸಾಗರ ಆಸ್ಪತ್ರೆಗೆ 2 ಹೆಚ್ಚುವರಿಯಾಗಿ ವೆಂಟಿಲೇಟರ್ ವ್ಯವಸ್ಥೆಯನ್ನು ಮಾಡಲು ಆದೇಶಿಸಲಾಗಿದೆ ಎಂದು ಹೇಳಿದರು.

ಮಂಗನ ಕಾಯಿಲೆಯನ್ನು ತಡೆಯಲು ಡಿಎಂಪಿ, ವ್ಯಾಕ್ಸಿನೇಷನ್ ಖರೀದಿಗೆ ಅನುದಾನ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಮಂಗನ ಕಾಯಿಲೆ ಈ ಭಾಗದಲ್ಲಿ 1956 ರಲ್ಲಿ ಪ್ರಥಮ ಬಾರಿಗೆ ಕಾಣಿಸಿಕೊಂಡ ಕಾಯಿಲೆಯಾಗಿದೆ ಎಂದು ವಿವರಿಸಿದರು.

Facebook Comments