ದೇವಾಲಯದ ಕಾವಲುಗಾರನ ಬರ್ಬರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder--00ಮಂಡ್ಯ, ಜ.14- ದೇವಾಲಯವೊಂದರ ಕಾವಲುಗಾರನನ್ನು ದುಷ್ಕರ್ಮಿಗಳು ಕೊಲೆ ಮಾಡಿ ದೇವರ ಮೇಲಿದ್ದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದೆ.

ಕೊಲೆಯಾದ ಕಾವಲುಗಾರನನ್ನು ಬಸವಯ್ಯ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ದೂರು ತಾಲೂಕು ತೊಪ್ಪನಹಳ್ಳಿ ಗ್ರಾಮದ ಮುತ್ತುರಾಯ ದೇವಸ್ಥಾನದ ಕಾವಲುಗಾರನಾಗಿ ಹಲವಾರು ವರ್ಷಗಳಿಂದ ಬಸವಯ್ಯ ಕೆಲಸ ನಿರ್ವಹಿಸುತ್ತಿದ್ದರು.

ತಡರಾತ್ರಿ ದುಷ್ಕರ್ಮಿಗಳು ಈ ದೇವಾಲಯಕ್ಕೆ ನುಗ್ಗಿ ಬಸವಯ್ಯನನ್ನು ಮಾರಕಾಸ್ತ್ರದಿಂದ ಕೊಲೆ ಮಾಡಿ ದೇವರ ಮೇಲಿದ್ದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಇಂದು ಮುಂಜಾನೆ ಈ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಮದ್ದೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಗುವಿನ ವಾತಾವರಣ: ವರ್ಷದ ಹಿಂದೆಯಷ್ಟೆ ಇಬ್ಬರು ಜೆಡಿಎಸ್ ಕಾರ್ಯಕರ್ತರ ಕೊಲೆಯಾಗಿತ್ತು. ಕಳೆದ ತಿಂಗಳು ಜಿಪಂ ಮಾಜಿ ಅಧ್ಯಕ್ಷೆಯ ಪತಿಯನ್ನು ಕೊಲೆ ಮಾಡಲಾಗಿತ್ತು.

ಈ ಎರಡೂ ಘಟನೆಗಳು ಮಾಸುವ ಮುನ್ನವೇ ಮತ್ತೆ ತೊಪ್ಪನಹಳ್ಳಿಯಲ್ಲಿ ಕಾವಲುಗಾರನ ಕೊಲೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Facebook Comments