ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಬಿಎಸ್‍ಎಫ್ ಯೋಧರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Border--01
ಶ್ರೀನಗರ, ಜ.15- ಕಾಶ್ಮೀರ ಕಣಿವೆ ಗಡಿಭಾಗದಲ್ಲಿ ಪಾಕಿಸ್ತಾನ ಸೇನಾಪಡೆಯ ಉದ್ಧಟತನ ಮುಂದುವರಿದಿದೆ. ಜಮ್ಮು-ಕಾಶ್ಮೀರದ ಕಥುವಾ ಮತ್ತು ರಜೌರಿ ಜಿಲ್ಲೆಗಳ ಅಂತಾರಾಷ್ಟ್ರೀಯ ಗಡಿ (ಐಬಿ) ಮತ್ತು ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಪ್ರದೇಶಗಳಲ್ಲಿ ಪಾಕಿಸ್ತಾನ ಯೋಧರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಗಡಿಭದ್ರತಾ ಪಡೆ (ಬಿಎಸ್‍ಎಫ್)ನ ಕೆಲವು ಯೋಧರು ಗಾಯಗೊಂಡಿದ್ದಾರೆ. ಕಥುವಾ ಜಿಲ್ಲೆಯ ಈರಾನಗರ್ ವಲಯದ ಐಬಿ ಮತ್ತು ರಜೌರಿ ಜಿಲ್ಲೆಯ ಸುಂದರ್‍ಬರಿ ಸೆಕ್ಟರ್‍ನ ಎಲ್‍ಒಸಿ ಪ್ರದೇಶಗಳ ಮೇಲೆ ಪಾಕಿಸ್ತಾನಿ ರೇಂಜರ್‍ಗಳು ರೈಫಲ್ ಮತ್ತು ಮಾರ್ಟರ್‍ಗಳಿಂದ ದಾಳಿ ನಡೆಸಿದ್ದಾರೆ.

ಈ ಕೃತ್ಯದಲ್ಲಿ ಬಿಎಸ್‍ಎಫ್‍ನ ಕೆಲವು ಯೋಧರಿಗೆ ಗಾಯಗಳಾಗಿವೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನದ ಉದ್ಧಟತನಕ್ಕೆ ರಾಜಕೀಯ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದು, ಕೆಲಕಾಲ ಗುಂಡಿನ ಚಕಮಕಿ ನಡೆದಿದೆ.

Facebook Comments

Sri Raghav

Admin