ಕೈಕೊಟ್ಟ ಪಕ್ಷೇತರರು, ನೋ ಟೆನ್ಶನ್ ಎಂದ ಸಿಎಂ ಕುಮಾರಸ್ವಾಮಿ..!

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01'

ಬೆಂಗಳೂರು. ಜ. 15 : ಮೈತ್ರಿ ಸರ್ಕಾರ ಸುಭದ್ರವಾಗಿದ್ದು ನಮಗೆ ಯಾವುದೇ ಟೆನ್ಶನ್ ಇಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ . ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಗಮನಿಸಿ ಎಂಜಾಯ್ ಮಾಡಿದ್ದೇನೆ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸುವ ಮುನ್ನ ಅವರು ನಗರದಲ್ಲಿ ಮಾಧ್ಯಮಗಳಿಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

ಈಗ ತಾವು ಸಂಪೂರ್ಣ ನಿರಾಳವಾಗಿದ್ದು ಬಿಜೆಪಿ ನಡೆಸುತ್ತಿರುವ ತಂತ್ರಕ್ಕೆ ಪ್ರತಿತಂತ್ರ ಹೂಡುವ ಅಗತ್ಯವಿಲ್ಲ, ಯಾವುದೇ ಟೆನ್ಶನ್ ಕೂಡ ಇಲ್ಲ ಎಂದು ಹೇಳಿದರು. ಬಿಜೆಪಿಯವರ ಬಳಿ ಎಷ್ಟು ಮಂದಿ ಶಾಸಕರಿದ್ದಾರೆ..? ಎಂದು ಮಾಧ್ಯಮದವರನ್ನು ಪ್ರಶ್ನಿಸಿದ ಸಿಎಂ ಮೈತ್ರಿ ಸರ್ಕಾರಕ್ಕೆ ಸಂಖ್ಯಾಬಲದ ಕೊರತೆ ಎದುರಾಗಿಲ್ಲ ಎಂದು ಹೇಳಿದರು.

ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಪಕ್ಷೇತರ ಶಾಸಕರಾದ ಆರ್. ಶಂಕರ್ ಮತ್ತು ಹೆಚ್ ನಾಗೇಶ್ ಅವರು ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.

ಅತೃಪ್ತ ಆಡಳಿ ಪಕ್ಷದ ಶಾಸಕರು ತಮ್ಮ ಸಂಪರ್ಕದಲ್ಲೇ ಇದ್ದಾರೆ ಇದರಿಂದ ಸರ್ಕಾರಕ್ಕೆ ಏನೂ ಆಗುವುದಿಲ್ಲ ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments

Sri Raghav

Admin