ದೋಸ್ತಿ ಸರ್ಕಾರದಿಂದ ದೂರವಾದ ಪಕ್ಷೇತರ ಶಾಸಕರು ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

independent-MLAs
ಬೆಂಗಳೂರು, ಜ.15- ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರದ ಸ್ಥಿತಿ ಡೋಲಾಯಮಾನವಾಗಿರುವಾಗಲೇ ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆದಿದ್ದಾರೆ.

ರಾಣೆಬೆನ್ನೂರಿನ ಪಕ್ಷೇತರ ಶಾಸಕ ಆರ್.ಶಂಕರ್, ಮುಳಬಾಗಿಲಿನ ಎಚ್.ನಾಗೇಶ್ ಈ ಇಬ್ಬರೂ ಶಾಸಕರು ಸಮ್ಮಿಶ್ರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ಬರು ಶಾಸಕರು , ಈ ಸಮ್ಮಿಶ್ರ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ, ನಮ್ಮ ನಿರೀಕ್ಷೆಯಂತೆ ಅಭಿವೃದ್ಧಿ ಮಾಡಲಾಗದಿದ್ದ ಮೇಲೆ ಈ ಸರ್ಕಾರಕ್ಕೆ ಬೆಂಬಲ ಕೊಟ್ಟು ಪ್ರಯೋಜನ ಇಲ್ಲ ಎಂದು ಆರೋಪಿಸಿದ್ದಾರೆ.

ಜೊತೆಗೆ ಬಿಜೆಪಿ ಸುಭದ್ರಾ ಸರ್ಕಾರ ರಚಿಸಲು ಮುಂದಾಗಿದೆ , ಅದಕ್ಕೆ ತಾವು ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಪಕ್ಷೇತರ ಶಾಸಕರಾಗಿರುವ ಅವರು ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರರಾಗಿದ್ದಾರೆ.

ಯಾವ ಕಾರಣಕ್ಕಾಗಿ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದಾರೋ ಗೊತ್ತಿಲ್ಲ, ಆದರೆ ಅವರ ಆರೋಪಗಳಲ್ಲಿ ಸತ್ಯವಿಲ್ಲ ಎಂದಿದ್ದಾರೆ.  ಶಂಕರ್ ಅವರು ಸಚಿವರಾಗಿ ಕೆಲಸ ಮಾಡಿದರು , ಈಗ ಆರೋಪ ಮಾಡುತ್ತಾ ಸಮ್ಮಿಶ್ರ ಸರ್ಕಾರದಲ್ಲಿ ಕೆಲಸಗಳೇ ಆಗುತ್ತಿಲ್ಲ ಎಂದಿದ್ದಾರೆ. ಅವರು ಸಚಿವರಾಗಿದ್ದಾಗ ಕೆಲಸ ಮಾಡಲು ಯಾರೂ ಕೈಹಿಡಿದಿರಲಿಲ್ಲ ಎಂದು ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

 

Facebook Comments

Sri Raghav

Admin