ಮೈತ್ರಿ ಸರ್ಕಾರಕ್ಕೆ ಯಾವ ಆಪತ್ತು ಇಲ್ಲ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್

ಈ ಸುದ್ದಿಯನ್ನು ಶೇರ್ ಮಾಡಿ

H-Vishwanath
ಬೆಂಗಳೂರು,ಜ.16- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಯಾವ ಆಪತ್ತು ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಎಚ್. ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಬಗ್ಗೆ ತಾವು ತಲೆಕೆಡಿಸಿಕೊಂಡಿಲ್ಲ. ಜೆಡಿಎಸ್‍ನ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆಪರೇಷನ್ ಕಮಲದ ಬಗ್ಗೆ ನಮಗೆ ಮಾಹಿತಿ ಇಲ್ಲ. ;ಮಾಹಿತಿ ಇಲ್ಲದೇ ಮಾತನಾಡುವುದು ಸರಿಯಲ್ಲ ಎಂದರು. ಬಿಜೆಪಿಯವರು ಚಟ. ಅವರ ಹಠ ಸಾಧನೆಯೂ ಆಗುವುದಿಲ್ಲ. ಚಟ ಸಾಧನೆಯೂ ಆಗುವುದಿಲ್ಲ ಎಂದು ಟೀಕಿಸಿದರು.

ನಾಳೆ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶವಿದ್ದು ಅದರ ಬಗ್ಗೆ ಚರ್ಚಿಸುವ ಉದ್ದೇಶದಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿರುವುದಾಗಿ ತಿಳಿಸಿದರು.

Facebook Comments

Sri Raghav

Admin