ನಾವು ಕೂಡ ಆಪರೇಷನ್ ಮಾಡುವ ಅಗತ್ಯವಿಲ್ಲ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

HD Kumaraswamy
ಬೆಂಗಳೂರು, ಜ.16-ಆಡಳಿತ ಪಕ್ಷದ ಶಾಸಕರನ್ನು ರೆಸಾರ್ಟ್ ಗೆ ಕರೆದೊಯ್ಯುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಶಾಸಕರು ತಮ್ಮ ಸಂಪರ್ಕದಲ್ಲಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ನನಗೆ ಎಲ್ಲವೂ ಗೊತ್ತಿದೆ. ನಾವ್ಯಾರು ಕೂಡ ಆಪರೇಷನ್ ಮಾಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ರೆಸಾಟ್ರ್ಸ್‍ಗೆ ಕರೆದೊಯ್ಯುವ ಅವಶ್ಯಕತೆ ನಮಗಿಲ್ಲ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ.

ನಾನು ಕೂಲ್ ಆಗಿದ್ದೇನೆ ಎಂದ ಮೇಲೆ ಏನಾಗಿದೆ ಎಂಬುದನ್ನು ನೀವೇ ಅರ್ಥ ಮಾಡಿಕೊಳ್ಳಿ ಎಂದು ತಿಳಿಸಿದರು. ಮಾಜಿ ಸಚಿವ ರಮೇಶ್ ಜಾರಕಿ ಹೊಳಿ, ಶಾಸಕ ನಾಗೇಂದ್ರ ಸೇರಿದಂತೆ ಉಳಿದವರೂ ಕೂಡ ತಮ್ಮ ಸಂಪರ್ಕದಲ್ಲಿದ್ದಾರೆ. ಆದರೆ ಅವರು ನಿಮಗೆ ನಾಟ್ ರೀಚಬಲ್ ಆಗಿರಬಹುದು. ಕಳೆದ ಮೂರು ದಿನಗಳಿಂದ ಎಲ್ಲರ ಜೊತೆ ಮಾತನಾಡಿದ್ದೇನೆ. ಜೆಡಿಎಸ್‍ನಿಂದ ಆಪರೇಷನ್ ಮಾಡುವ ಅಗತ್ಯವಿಲ್ಲ.

ಎಲ್ಲದಕ್ಕೂ ಸೂಕ್ತ ಸಮಯ ಬರಬೇಕು ಎಂದು ಮಾರ್ಮಿಕವಾಗಿ ನುಡಿದರು.  ಎಲ್ಲವೂ ನಮ್ಮ ನಿಯಂತ್ರಣದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ನಾವು ಹುಡುಗಾಟ ಆಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

Facebook Comments

Sri Raghav

Admin