ಬಿಬಿಎಂಪಿ ಮಾಜಿ ಮೇಯರ್ ವೆಂಕಟೇಶ್‍ಮೂರ್ತಿ ಸಹೋದರ ನಾಗಣ್ಣ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

naganna---01

ಬೆಂಗಳೂರು,ಜ.17- ಮಾಜಿ ಮೇಯರ್ ವೆಂಕಟೇಶ್‍ಮೂರ್ತಿ ಅವರ ಸಹೋದರ ನಾಗಣ್ಣ(58) ಕಳೆದ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಬೆಳಗ್ಗೆ ಪ್ರಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು ತಮ್ಮ ಸಹೋದರ ವೆಂಕಟೇಶ್‍ಮೂರ್ತಿ ಅವರೊಂದಿಗೆ ರಾಜಕೀಯದಲ್ಲಿ ತಮ್ಮದೇ ಅಭಿಮಾನಿ ಬಳಗ ಹೊಂದಿದ್ದರು.

ಇತ್ತೀಚೆಗೆ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದರು. ಮೃತರು ಮೂವರು ಮಕ್ಕಳು, ಪತ್ನಿ, ಇಬ್ಬರು ಸಹೋದರರು ಹಾಗೂ ತಾಯಿಯನ್ನು ಅಗಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin