ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿದ ಡಿಸಿಎಂ ಪರಮೇಶ್ವರ್ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Parameshwar---01
ತುಮಕೂರು, ಜ.17- ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ಸ್ಥಿರವಾಗಿದೆ. ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಎಲ್ಲಾ ವೈಟಲ್, ಆರ್ಗನ್ಸ್ ನಾರ್ಮಲ್ ಆಗಿದೆ. ನಿನ್ನೆ ಶ್ರೀಗಳು ಕಣ್ಣು ಬಿಟ್ಟು ನೋಡಿದ್ದಾಗಿ ವೈದ್ಯರು ಹೇಳಿದ್ದಾರೆ. ಸದ್ಯ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.

ಭಕ್ತರಲ್ಲಿ ಆತಂಕ:
ಮತ್ತೊಂದೆಡೆ ಶ್ರೀಗಳ ಆರೋಗ್ಯದ ಕುರಿತು ಆತಂಕಗೊಂಡಿರುವ ಭಕ್ತರು, ಮಠದ ವಿದ್ಯಾರ್ಥಿಗಳು ಮಠದ ಆವರಣದಲ್ಲೇ ಜಮಾವಣೆಗೊಂಡಿದ್ದಾರೆ. ಶ್ರೀಗಳಿಗೆ ಚಿಕಿತ್ಸೆ ಮುಂದುವರೆಯುತ್ತಿರುವುದಾಗಿ ಆಗಾಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರಾದರೂ ಆತಂಕ ಮಾತ್ರ ದೂರವಾಗಿಲ್ಲ. ಈ ನಡುವೆ ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಗಣ್ಯರ ದಂಡು: ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವ ವಿ.ಸೋಮಣ್ಣ , ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಶ್ರೀಗಳ ಆರೋಗ್ಯ ವಿಚಾರಿಸಿದರು.

Facebook Comments

Sri Raghav

Admin