ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಪ್ರಬಲ ಭೂಕಂಪ, ಸುನಾಮಿ ಆತಂಕವಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Andaman--01
ಪೋರ್ಟ್ ಬ್ಲೇರ್, ಜ.17 (ಪಿಟಿಐ)- ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಗರ್ಭ ಅಧ್ಯಯನ ಕೇಂದ್ರ(ಎನ್‍ಸಿಎಸ್) ತಿಳಿಸಿದೆ.

ರಿಕ್ಟರ್ ಮಾಪಕದಲ್ಲಿ 6ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಅಂಡಮಾನ್-ನಿಕೋಬಾರ್ ದ್ವೀಪ ಸಮೂಹಗಳ ಸಮುದ್ರದ ನೀರಿನಲ್ಲಿ ಗಮನಾರ್ಹ ಏರಿಕೆ ಕಂಡುಬಂದಿಲ್ಲ.

ಹೀಗಾಗಿ ಸುನಾಮಿ ಎಚ್ಚರಿಕೆ ನೀಡುವ ಅಗತ್ಯವಿಲ್ಲ ಎಂದು ಕೇಂದ್ರದ ನಿರ್ದೇಶಕ ಎಸ್.ಪಿ.ಎಸ್.ಶೆಣೈ ತಿಳಿಸಿದ್ದಾರೆ.

ಇಂದು ಬೆಳಗ್ಗೆ 8.43ರಲ್ಲಿ ಭೂಕಂಪ ಸಂಭವಿಸಿದೆ. ಇದರ ಕೇಂದ್ರ ಬಿಂದು ನಿಕೋಬಾರ್ ದ್ವೀಪ ಪ್ರಾಂತ್ಯದಲ್ಲಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಭೂಕಂಪದಿಂದ ಸಾವು-ನೋವು, ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.

Facebook Comments

Sri Raghav

Admin