ಚಿರತೆ ಮರಿ ರಕ್ಷಿಸಿದ ಅರಣ್ಯ ಸಿಬ್ಬಂದಿಗಳು

ಈ ಸುದ್ದಿಯನ್ನು ಶೇರ್ ಮಾಡಿ

0ತಿಪಟೂರು.ಜ.17-ರಸ್ತೆ ದಾಟುವ ಸಂದರ್ಭದಲ್ಲಿ ವಾಹನ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ 6 ತಿಂಗಳ ಚಿರತೆಮರಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ತಾಲ್ಲೂಕಿನ ಕೋಟನಾಯಕನಹಳ್ಳಿ ಹೊರವಲಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ 6 ತಿಂಗಳ ಗಂಡುಚಿರತೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ನರಳುತ್ತಿತ್ತು.

ಸಾರ್ವಜನಿಕರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪಶು ಇಲಾಖೆಯ ವೈದ್ಯ ಭಾನುಪ್ರಕಾಶ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ನೀಡಿ ಚಿರತೆ ಮರಿಯನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟದ ಅರಣ್ಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಿಪಟೂರು ಆರ್‍ಎಫ್‍ಒ ರಾಕೇಶ್ ಮಾಹಿತಿ ನೀಡಿದ್ದಾರೆ. ರಕ್ಷಣೆ ಕಾರ್ಯದಲ್ಲಿ ಅರಣ್ಯ ಸಿಬ್ಬಂದಿಗಳಾದ ಉಪವಲಯ ಅರಣ್ಯಾಧಿಕಾರಿ ಶಿವಕುಮಾರ್, ಅರಣ್ಯ ರಕ್ಷಕರಾದ ಜಯಸ್ವಾಮಿ, ಶಿವಪ್ಪ, ಪ್ರದೀಪ್ ಮತ್ತಿತರರಿದ್ದರು.

Facebook Comments