ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

jaillಮೈಸೂರು, ಜ.17- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ಜಿಲ್ಲಾ ಪೋಸ್ಕೋ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ನಗರದ ಹಿನಕಲ್‍ವಾಸಿ ತಿಮ್ಮಯ್ಯ (21) ಶಿಕ್ಷೆಗೆ ಗುರಿಯಾದ ಆರೋಪಿ. ನಗರದ ಖಾಸಗಿ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಈತ ಸಂಜೆ ಟ್ಯೂಷನ್ ನಡೆಸುತ್ತಿದ್ದನು.

2016ರ ಆ.10ರಂದು ನಾಲ್ಕು ವರ್ಷದ ಬಾಲಕಿ ಮೇಲೆ ಈತ ದೌರ್ಜನ್ಯ ವೆಸಗಿದ್ದ. ಈ ಬಗ್ಗೆ ಪೋಷಕರಿಗೆ ಬಾಲಕಿ ವಿಷಯ ತಿಳಿಸಿದ್ದಳು.ಬಾಲಕಿ ತಾಯಿ ವಿಜಯನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಯಾಧೀಶರಾದ ಜೈಯಶ್ರೀ ಅವರು ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.

Facebook Comments