ಈಗಲ್ ಟನ್ ರೆಸಾರ್ಟ್ ಸೇರಿದ ‘ಕೈ’ ಶಾಸಕರು..!

ಈ ಸುದ್ದಿಯನ್ನು ಶೇರ್ ಮಾಡಿ

bUS--01

ಬೆಂಗಳೂರು: ಬೆಂಗಳೂರು, ಜನವರಿ 18 : ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ನಾಲ್ವರು ಶಾಸಕರು ಸಭೆಗೆ ಗೈರಾಗಿದ್ದು, 76 ಶಾಸಕರು ಹಾಜರಾಗಿದ್ದರು.

ನಂತರ ಮಹತ್ವದ ಬೆಳವಣಿಗೆ ನಡೆದಿದ್ದು ವಿಧಾನಸೌಧದಿಂದ ಶಾಸಕರನ್ನು ಮಾಡಲಾಗಿದೆ. . 7 ಗಂಟೆ ಸುಮಾರಿಗೆ ವಿಧಾನಸೌಧಕ್ಕೆ ಆಗಮಿಸಿದ್ದ ಎರಡು ಖಾಸಗಿ ಟ್ರಾವೆಲ್ಸ್ ನ ಬಸ್ ಗಳಲ್ಲಿ ಕಾಂಗ್ರೆಸ್ ಶಾಸಕರು ರೆಸಾರ್ಟ್‌ನತ್ತ ಪ್ರಯಾಣ ಬೆಳೆಸಿದರು.

ಈ ಮೂಲಕ ಆಪರೇಷನ್ ಚಾಪ್ಟರ್ -2 ಶುರುವಾದಂತಾಗಿದೆ. ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ಗೆ ಕರೆದೊಯ್ದಿದ್ದೇಕೆ, ಎಂಬುದ್ ಈಗ ಹೊಸ ಕುತೂಹಲ.

ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಆರಂಭವಾಯಿತು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಮುಗಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ 80ರಲ್ಲಿ ಒಟ್ಟು 76 ಶಾಸಕರು ಸಭೆಗೆ ಹಾಜರಾಗಿದ್ದಾರೆ. ಉಮೇಶ್ ಜಾಧವ್ ಆನಾರೋಗ್ಯ ಹಿನ್ನೆಲೆಯಲ್ಲಿ ಸಭೆ ಬಂದಿಲ್ಲ. ಈ ಸಂಬಂಧ ಪತ್ರವನ್ನು ರವಾನಿಸಿದ್ದಾರೆಂದು ಮಾಧ್ಯಮಗಳಿಗೆ ತೋರಿಸಿದರು.

ಶಾಸಕ ನಾಗೇಂದ್ರ ಅವರು ಕೋರ್ಟ್ ಕೆಲಸದಲ್ಲಿದ್ದರಿಂದ ಬರೋದಕ್ಕೆ ಆಗಿಲ್ಲ. ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಸಂಪರ್ಕಕ್ಕೆ ಸಿಗುತ್ತಿಲ್ಲ. ಶಾಸಕಾಂಗ ಸಭೆಗೆ ಗೈರಾಗಿರುವ ಶಾಸಕರಿಗೆ ನೋಟಿಸ್ ನೀಡಲಾಗುವುದು ಅಂತ ಹೇಳಿದರು.

ಶಾಸಕರು ಸಭೆಗೆ ಗೈರಾಗಿದ್ದರು. ಗೈರು ಹಾಜರಾದವರಿಗೆ ನೋಟಿಸ್ ನೀಡಿ ವಿವರಣೆ ಪಡೆಯುತ್ತೇವೆ. ಕಾಂಗ್ರೆಸ್‌ನ ಯಾವ ಶಾಸಕರು ಬಿಜೆಪಿಗೆ ಹೋಗಿಲ್ಲ. ಬಿಜೆಪಿಯವರು ಹೇಳಿದ್ದ ಸುಳ್ಳು ಈಗ ಬಯಲಾಗಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದರು.  ಇನ್ನು ಸಭೆಗೆ ರಮೇಶ್‌ ಜಾರಕಿಹೊಳಿ, ನಾಗೇಂದ್ರ, ಉಮೇಶ್‌ ಜಾಧವ್‌ . ಮಹೇಶ್ ಕುಮಟವಳ್ಳಿ ಗೈರು ಹಾಜರಾಗಿ ಪಕ್ಷಕ್ಕೆ ಸೆಡ್ಡು ಹೊಡೆದರು.

ಶಾಸಕಾಂಗ  ಸಭೆಯಲ್ಲಿ ರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ   ಶಾಸಕಾಂಗ ಪಕ್ಷದ ಸಭೆಯಲ್ಲಿ ಉಪಸ್ಥಿತರಿದ್ದರು.

# ಗೈರು ಹಾಜರಾದ ಶಾಸಕರಿಗೆ ನೋಟಿಸ್ :
ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿರುವ ನಾಲ್ವರು ಶಾಸಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುತ್ತೇನೆ. ಅವರಿಂದ ನೋಟಿಸ್‌ಗೆ ಉತ್ತರ ಬಂದ ಬಳಿಕ, ಪಕ್ಷದ ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ವಿಶೇಷ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚಿಂಚೋಳಿ ಕ್ಷೇತ್ರದ ಶಾಸಕ ಡಾ.ಉಮೇಶ್ ಜಾಧವ್ ನನಗೆ ಪತ್ರ ಬರೆದಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ, ನಮ್ಮ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಮಾತನಾಡಿದ್ದಾರೆ ಎಂದರು.

ಇನ್ನುಳಿದಂತೆ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ನಮ್ಮ ಜೊತೆ ಮಾತನಾಡಿಲ್ಲ. ಉಮೇಶ್ ಜಾಧವ್ ಬರೆದಿರುವ ಪತ್ರ ಹಾಗೂ ನ್ಯಾಯಾಲಯದಲ್ಲಿ ಕೆಲಸ ಇರುವುದಾಗಿ ನಾಗೇಂದ್ರ ನೀಡಿರುವ ಸ್ಪಷ್ಟಣೆಯ ಸತ್ಯಾಸತ್ಯತೆ ಕುರಿತು ನಾನು ಪರಿಶೀಲನೆ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

 

Facebook Comments

Sri Raghav

Admin