ಶಾಸಕಾಂಗ ಸಭೆಗೆ ಯಾರು ಬರ್ತಾರೆ, ಯಾರು ‘ಕೈ’ ಕೊಡ್ತಾರೆ..? ಗುಂಡೂರಾವ್ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

dinesh gunduraoಬೆಂಗಳೂರು, ಜ.18- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಎಲ್ಲಾ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕುಮಾರಕೃಪಾ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರ ಜತೆ ರಹಸ್ಯ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಯಾವ ಶಾಸಕರೂ ಪಕ್ಷ ಬಿಡುತ್ತಿಲ್ಲ. ಸರ್ಕಾರ ಸುಭದ್ರವಾಗಿದೆ. ಐದು ವರ್ಷ ಸುಸ್ಥಿರ ಆಡಳಿತ ನಡೆಸಲಿದೆ ಎಂದು ಹೇಳಿದರು.

ಬಿಜೆಪಿಯವರ ಪ್ರಯತ್ನಗಳು ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್‍ನ ಯಾವ ಶಾಸಕರೂ ಬಿಜೆಪಿಯವರ ಜತೆ ಇಲ್ಲ. ಎಲ್ಲರೂ ನಮ್ಮ ಸಂಪರ್ಕದಲ್ಲಿದ್ದಾರೆ. ಇಂದು ಶಾಸಕಾಂಗ ಸಭೆಗೆ ಎಲ್ಲರೂ ಭಾಗವಹಿಸುವುದನ್ನು ನೀವು ನೋಡುತ್ತೀರಿ. ಸಭೆಗೂ ಮೊದಲು ಅಲ್ಲಿ ನಡೆಯುವ ಚರ್ಚೆ, ತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆ ಈಗ ಚರ್ಚಿಸುವುದು ಸರಿಯಲ್ಲ ಎಂದರು.

ಬಿಜೆಪಿ ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕಿತ್ತು. ಅದನ್ನು ಬಿಟ್ಟು ಗುರುಗ್ರಾಮದ ಪಂಚತಾರಾ ಹೋಟೆಲ್‍ನಲ್ಲಿ ಶಾಸಕರನ್ನು ಕೂಡಿಹಾಕಿ ಐಷಾರಾಮಿ ಜೀವನ ನಡೆಸುತ್ತಿದೆ. ಇಲ್ಲಿ ಬರ ಪರಿಸ್ಥಿತಿ ಇದೆ. ಇದರ ಬಗ್ಗೆ ಚರ್ಚೆ ಮಾಡದೆ ಬರ ಕಾಮಗಾರಿಗಳಲ್ಲಿ ತೊಡಗಿಸಿಕೊಳ್ಳದೆ ಶಾಸಕರು ಹೋಟೆಲ್‍ನಲ್ಲಿ ಕುಳಿತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

Facebook Comments