ಸಿದ್ಧಗಂಗಾ ಶ್ರೀಗಳು ಶೀಘ್ರ ಗುಣಮುಖರಾಗಲಿ ಎಂದು ಕನ್ನಡದಲ್ಲಿಯೇ ಮೋದಿ ಟ್ವೀಟ್

ಈ ಸುದ್ದಿಯನ್ನು ಶೇರ್ ಮಾಡಿ

Modi--01

ನವದೆಹಲಿ, ಜ.18- ಸಿದ್ಧಗಂಗಾ ಮಠದ ಮಠಾಧೀಶರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಕೋರಿ ವಿವಿಧೆಡೆ ವಿಶೇಷ ಪ್ರಾರ್ಥನೆಗಳು ನಡೆಯುತ್ತಿವೆ.

ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿಯವರದ್ದು ಅಮೋಘ ವ್ಯಕ್ತಿತ್ವ.

ಅವರ ಮಹೋನ್ನತ ಸೇವೆ ಕೋಟ್ಯಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣಮುಖರಾಗಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.  ಪ್ರಧಾನಿ ಮೋದಿ ಅವರ ಟ್ವೀಟ್‍ಗೆ 10,387 ಲೈಕ್ಸ್ , 345 ಪ್ರತಿಕ್ರಿಯೆ ಹಾಗೂ 2,150 ಪ್ರತಿ ಟ್ವೀಟ್‍ಗಳು ಬಂದಿವೆ.

ಟ್ವೀಟ್ ನಲ್ಲೇನಿದೆ..?  : ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ . ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ.

Facebook Comments

Sri Raghav

Admin