ಜ.23 ರಿಂದ 25ರವರೆಗೆ ರಾಷ್ಟ್ರೀಯ ತೋಟಗಾರಿಕಾ ಮೇಳ

ಈ ಸುದ್ದಿಯನ್ನು ಶೇರ್ ಮಾಡಿ

Krushi--0-1

ದಾಸರಹಳ್ಳಿ, ಜ.19-ರೈತರ ಜೀವನ ಮಟ್ಟ ಹಾಗೂ ಆರ್ಥಿಕ ಮಟ್ಟ ಸುಧಾರಣೆಗೆ ವ್ಯವಸಾಯವನ್ನು ಲಾಭದಾಯಕ ಉದ್ಯಮ ವಾಗಿಸುವ ಮೂಲಕ ಗ್ರಾಮೀಣ ಸಮೃದ್ಧಿಗೆ ವಿಶಿಷ್ಟ ಕೃಷಿ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ ಎಂದು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ನಿರ್ದೇಶಕ ಎಂ.ಆರ್.ದಿನೇಶ್ ತಿಳಿಸಿದ್ದಾರೆ.

ನಗರದ ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಆಶಯದಂತೆ ರೈತರ ಆದಾಯವನ್ನು ದ್ವಿಗುಣ ಗೊಳಿಸಲು ಸಂಸ್ಥೆ ಕೈಜೋಡಿಸಿದೆ ಎಂದರು.

ಈ ನಿಟ್ಟಿನಲ್ಲಿ ಪಾರಂಪಾರಿಕ ಸಾವಯವ ಕೃಷಿಯಿಂದ ರೈತರು ಹೆಚ್ಚಿನ ಆದಾಯ ಗಳಿಸಲು ತರಕಾರಿ, ಹಣ್ಣು, ಹೂವಿನ ವಿಶಿಷ್ಟ ತಳಿ ಹಾಗೂ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.

ನಾಟಿ ಸಮಯದಿಂದ ಕೊಯ್ಲು ಸಮಯ ದವರೆಗಿನ ತಂತ್ರಜ್ಞಾನವನ್ನು ರೈತರಿಗೆ ತಲುಪಿಸಲು ಇದೇ ತಿಂಗಳ 23 ರಿಂದ 25ರ ವರೆಗೆ ರಾಷ್ಟ್ರೀಯ ತೋಟಗಾರಿಕಾ ಮೇಳವನ್ನು ಆಯೋಜಿಸಲಾಗಿದ್ದು ರೈತರು, ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಸಂಸ್ಥೆಯು 250ಕ್ಕೂ ಹಣ್ಣಿನ ಬೆಳೆ, ತರಕಾರಿ, ಹೂವಿನ ತಳಿಗಳನ್ನು ರೈತರಿಗೆ ಅಭಿವೃದ್ಧಿಪಡಿಸಿದೆ ಎಂದರು ಸದಾಶಿವ, ಅಘೋರ ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin