ಸೆರೆಸಿಕ್ಕ ಪಾರಿವಾಳ ಮಂಜ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

Pariwala-Manja--01

ಬೆಂಗಳೂರು, ಜ.19- ಹಗಲು ವೇಳೆ ಮನೆಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ ಮಂಜ ಅಲಿಯಾಸ್ ಪಾರಿವಾಳ ಮಂಜ (39) ಎಂಬಾತನನ್ನು ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ 8 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಸಾಮಾನುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ನಿವಾಸಿ ಪ್ರಭು ಎಂಬುವರು ಜ.4ರಂದು ಎಂದಿನಂತೆ ಮನೆಗೆ ಬೀಗ ಹಾಕಿಕೊಂಡು ಬೆಳಗ್ಗೆ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನ 1.45ರಲ್ಲಿ ಮನೆಗೆ ಬಂದಾಗ, ಮನೆ ಬೀಗ ಒಡೆದು ಕಳ್ಳರು ಕಳ್ಳತನ ನಡೆಸಿರುವುದು ಗೊತ್ತಾಗಿದೆ.

ಈ ಬಗ್ಗೆ ಪ್ರಭು ಅವರು ಮಹಾಲಕ್ಷ್ಮಿ ಲೇಔಟ್ ಠಾಣೆಗೆ ದೂರು ನೀಡಿದ್ದರು. ಹಗಲು ಕಳ್ಳತನ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಮೂಲತಃ ತಮಿಳುನಾಡಿನವನಾದ, ಕುರುಬರ ಹಳ್ಳಿಯಲ್ಲಿ ವಾಸವಿದ್ದ ಮಂಜ ಅಲಿಯಾಸ್ ಪಾರಿವಾಳ ಮಂಜ ಎಂಬಾತನನ್ನು ಬಂಧಿಸಿ, 8 ಲಕ್ಷ ಬೆಲೆ ಬಾಳುವ 250 ಗ್ರಾಂ ಚಿನ್ನಾಭರಣ ಮತ್ತು ಒಂದು ಕೆಜಿ ಬೆಳ್ಳಿ ಸಾಮಾನುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯ ಬಂಧನದಿಂದ ಮಹಾಲಕ್ಷ್ಮಿ ಲೇಔಟ್‍ನ ಒಂದು ಪ್ರಕರಣ, ನಂದಿನಿ ಲೇ ಔಟ್ 2, ಗಿರಿ ನಗರ 1 ಪ್ರಕರಣ ಸೇರಿ
ಒಟ್ಟು 4 ಕನ್ನಗಳವು ಪ್ರಕರಣಗಳು ಪತ್ತೆಯಾಗಿವೆ. ಇನ್ಸ್‍ಪೆಕ್ಟರ್ ಪ್ರಶಾಂತ್ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Facebook Comments

Sri Raghav

Admin