ಕೋಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಗುಡುಗಿದ ಸಿಎಂ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kuamraswamy--01
ಕೋಲ್ಕತ್ತಾ, ಜ.19-ರಾಜ್ಯಗಳಲ್ಲಿ ಪ್ರಜಾಪ್ರಭುತ್ವದ ಮೂಲಕ ಅಧಿಕಾರಕ್ಕೆ ಬಂದಿರುವ ವಿರೋಧ ಪಕ್ಷಗಳ ಸರ್ಕಾರಗಳನ್ನು ಅಸ್ಥಿರಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಾಮಮಾರ್ಗಗಳನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಇಂದು ನಡೆದ ಬೃಹತ್ ಸಂಯುಕ್ತ ಪ್ರತಿಪಕ್ಷಗಳ ಮಹಾರ್ಯಾಲಿಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ಬಂಗಾಳಿ ಭಾಷೆಯಲ್ಲಿ ಭಾಷಣ ಆರಂಭಿಸಿದ ಕುಮಾರಸ್ವಾಮಿ, ನಂತರ ಇಂಗ್ಲೀಷ್‍ನಲ್ಲಿ ಭಾಷಣ ಮುಂದುವರೆಸಿ ಮೋದಿ ಮತ್ತು ಬಿಜೆಪಿ ಸರ್ಕಾರ ವೈಫಲ್ಯಗಳ ಬಗ್ಗೆ ಟೀಕಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಸರ್ಕಾರ ಉತ್ತಮ ಆಡಳಿತ ನೀಡುತ್ತಾ ಮುಂದುವರೆದಿದೆ. ಆದರೆ ಇದನ್ನು ಸಹಿಸದ ಬಿಜೆಪಿ ಸರ್ಕಾರವನ್ನು ದುರ್ಬಲಗೊಳಿಸಲು ಹವಣಿಸುತ್ತಿದೆ ಎಂದು ರಾಜ್ಯದ ಪರಿಸ್ಥಿತಿಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳನ್ನು ಪದಚ್ಯುತಿಗೊಳಿಸಲು ಎಲ್ಲಾ ಪಕ್ಷಗಳು ಸಮನ್ವಯತೆಯಿಂದ ಒಗ್ಗೂಡಬೇಕು, ಲೋಕಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕರೆ ನೀಡಿದರು.

Facebook Comments

Sri Raghav

Admin