ಬೆಳ್ಳಂಬೆಳಗ್ಗೆ ಬೆಳಗಾವಿಯಲ್ಲಿ ಡಬಲ್ ಮರ್ಡರ್..!

ಈ ಸುದ್ದಿಯನ್ನು ಶೇರ್ ಮಾಡಿ

Belagavi-Murder--01

ಬೆಳಗಾವಿ, ಜ.20- ಬೆಳಗಾವಿ ತಾಲ್ಲೂಕಿನ ಮಾರಿಹಾಳ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಗ್ರಾಮದ ಪತ್ತರೇಪ್ಪ ಮಲ್ಲನವರ (36), ಬಸವರಾಜ (23) ಕೊಲೆಯಾದ ದುರ್ದೈವಿಗಳು.

ಇಂದು ಮುಂಜಾನೆ ಮನೆಯಿಂದ ಜಮೀನತ್ತ ಹೊರಟಿದ್ದಾಗ ಹೊಲದ ಬಳಿಯೇ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸ್ಥಳೀಯರೊಬ್ಬರು ಹೊಲದ ಬಳಿ ಶವಗಳನ್ನು ನೋಡಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದಾವಿಸಿದ ಮಾರಿಹಾಳ ಸಿಪಿಐ ವಿಜಯ್ ಸಿನ್ನೂರ ಪರಿಶೀಲನೆ ನಡೆಸಿದ್ದಾರೆ.

ಕೊಲೆಗೆ ಈವರೆಗೂ ನಿಖರವಾದ ಕಾರಣ ಗೊತ್ತಾಗಿಲ್ಲ. ಆದರೂ ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಜೋಡಿ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬೆಳಗಾವಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin