‘ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಗುಲಾಮ’

ಈ ಸುದ್ದಿಯನ್ನು ಶೇರ್ ಮಾಡಿ

Jagadish-Shettar-Siddaramai

ಹುಬ್ಬಳ್ಳಿ, ಜ.20- ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಗುಲಾಮ. ಕಾಂಗ್ರೆಸ್ ಮತ್ತು ಜೆಡಿಎಸ್‍ನವರಲ್ಲಿ ಗೊಂದಲ ಮತ್ತು ಒಳಬೇಗುದಿಯಿದೆ. ಅವರಲ್ಲೇ ಮಂತ್ರಿ ಸ್ಥಾನಕ್ಕಾಗಿ, ಅಧಿಕಾರಕ್ಕಾಗಿ ಜಗಳ ನಡೆಯುತ್ತಿದೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರವಾಗಿ ಟೀಕಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರೆಸಾರ್ಟ್‍ಗೆ ಹೋಗಿದ್ದನ್ನು ಟೀಕಿಸಿದ್ದ ಸಿದ್ದರಾಮಯ್ಯನವರೇ ಈಗ  ರೆಸಾರ್ಟ್ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಬಲವಂತವಾಗಿ ರೆಸಾರ್ಟ್‍ಗೆ ಕರೆದೊಯ್ದಿದ್ದಾರೆ ಎಂದರು.

ಸಿದ್ದರಾಮಯ್ಯನವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಕೀಳಾಗಿ ಮಾತಾಡಿದ್ದಾರೆ. ಅವರಿಗೆ ಚಾಮುಂಡೇಶ್ವರಿಯಲ್ಲಿ ಹೀನಾಯವಾಗಿ ಸೋತರೂ ಬುದ್ಧಿ ಬಂದಿಲ್ಲ. ಬಾದಾಮಿಯಲ್ಲಿ ಒಂದು ಸಾವಿರ ಮತಗಳಿಂದ ಗೆದ್ದು ಅಹಂಕಾರದಿಂದ ವರ್ತಿಸುತ್ತಿದ್ದಾರೆ. ಹೀಗೆ ಮುಂದುವರಿದರೆ ಇಡೀ ಕರ್ನಾಟಕದ ಜನರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳಿಸುತ್ತಾರೆ ಎಂದು ಭವಿಷ್ಯ ನುಡಿದರು.

ಲೋಕಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಿಯೂ ಬರಬಹುದು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಯುತ ಮಾಡುವ ಕುರಿತು ಚರ್ಚೆ ನಡೆಸುತ್ತಿದ್ದೇವೆ. ದೆಹಲಿಯಲ್ಲಿ ರಾಷ್ಟ್ರೀಯ ಹಂತದಲ್ಲಿ ಚರ್ಚೆಯಾಯಿತು ಎಂದು ಅವರು ಹೇಳಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬಿಜೆಪಿ ಶಾಸಕರನ್ನು ಸೆಳೆಯುತ್ತಿರುವುದಾಗಿ ಹೇಳಿದ್ದರು.

ಸಿಎಮ್ ಮತ್ತು ಸಿದ್ದರಾಮಯ್ಯ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆಂದು ಹೇಳಿಕೆ ಕೊಟ್ಟಿದ್ದರು. ಹೀಗಾಗಿ ಬಿಜೆಪಿಯವರು ರೆಸಾರ್ಟ್‍ಗೆ ಹೋಗಬೇಕಾಯಿತು. ನಮ್ಮ ಶಾಸಕರ ನಡುವೆ ಮತ್ತಷ್ಟು ಒಗ್ಗಟ್ಟು ಮೂಡಿಸಲು ಹೋಗಿದ್ದಷ್ಟೆ ಎಂದು ಅವರು ಸ್ಪಷ್ಟಪಡಿಸಿದರು.

Facebook Comments

4 thoughts on “‘ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಗುಲಾಮ’

Comments are closed.