‘ಆಪರೇಷನ್ ಅಗತ್ಯವಿಲ್ಲ, ಆಂತರಿಕ ಕಚ್ಚಾಟದಿಂದ ಮೈತ್ರಿ ಸರ್ಕಾರ ಪತನವಾಗುತ್ತೆ’

ಈ ಸುದ್ದಿಯನ್ನು ಶೇರ್ ಮಾಡಿ

KS-Eshwarappaಬೆಂಗಳೂರು, ಜ.20- ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಬಿಜೆಪಿ ಧುರೀಣ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಗುರುಗ್ರಾಮದಿಂದ ಬಿಜೆಪಿ ಶಾಸಕರೊಂದಿಗೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರವನ್ನು ಉರುಳಿಸಲು ಬಿಜೆಪಿಗೆ ಆಪರೇಷನ್ ಕಮಲ ನಡೆಸುವ ಅಗತ್ಯವೇ ಇಲ್ಲ. ಮೈತ್ರಿ ಸರ್ಕಾರ ಆಂತರಿಕ ಕಚ್ಚಾಟದಿಂದ ಪತನಗೊಳ್ಳುವುದು ಸನ್ನಿಹಿತ ಎಂದು ಹೇಳಿದರು.

ನಮ್ಮ ಎಲ್ಲಾ 104 ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಕಾಂಗ್ರೆಸ್‍ನಲ್ಲಿ ನಾಲ್ಕೈದು ಶಾಸಕರು ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಹೇಳಿದರು. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಕಳೆದ ಏಳು ತಿಂಗಳಿನಿಂದ ಕಚ್ಚಾಟದಲ್ಲೇ ನಿರತವಾಗಿರುವ ಮೈತ್ರಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಹಕ್ಕಿಲ್ಲ ಎಂದರು.

Facebook Comments