ಅದ್ದೂರಿಯಾಗಿ ರಿಲೀಸ್ ಆಯ್ತು ‘ಸೀತಾರಾಮ ಕಲ್ಯಾಣ’ದ ಟ್ರೇಲರ್

ಈ ಸುದ್ದಿಯನ್ನು ಶೇರ್ ಮಾಡಿ

Nikhilಬೆಂಗಳೂರು,ಜ.20- ಅನಿತಾಕುಮಾರಸ್ವಾಮಿ ನಿರ್ಮಾಣದ ಜಾಗ್ವಾರ್ ನಿಖಿಲ್ ಕುಮಾರಸ್ವಾಮಿ ಅಭಿನಯನದ ಸೀತಾರಾಮ ಕಲ್ಯಾಣ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಮೈಸೂರಿನ ಬನ್ನಿಮಂಟಪದಲ್ಲಿರುವ ಟಾರ್ಚ್‍ಲೈಟ್ ಪರೇಡ್ ಮೈದಾನದಲ್ಲಿ ಎ.ಹರ್ಷ ನಿರ್ದೇಶನದ ಸೀತಾರಾಮ ಕಲ್ಯಾಣ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು.

ಸೀತಾರಾಮ ಕಲ್ಯಾಣ ಚಿತ್ರದ ನಾಯಕ ನಿಖಿಲ್‍ಕುಮಾರ ಸ್ವಾಮಿ, ನಾಯಕಿ ರಚಿತಾರಾಮ್ ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿದರು. ನಟಿಯರಾದ ರಾಗಿಣಿ, ಶರ್ಮಿಳಾ ಮಾಂಡ್ರೆ, ಮಾನ್ವಿತ ಹರೀಶ್ ಸೇರಿದಂತೆ ಬಹುತೇಕ ನಟ-ನಟಿಯರು ಹಾಗೂ ಖ್ಯಾತ ನೃತ್ಯಪಟುಗಳು ನೃತ್ಯ ಪ್ರದರ್ಶನ ಮಾಡಿದರು.

ಮೂರು ಗಂಟೆಗೂ ಹೆಚ್ಚು ಕಾಲ ಮನೋರಂಜನಾ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶಂಪೂರ್, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್ , ಚಿತ್ರರಂಗದ ಗಣ್ಯರು ಮತ್ತಿತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.  ಇದೇ 25ರಂದು ಚಿತ್ರ ಬಿಡುಗಡೆಗೊಳ್ಳಲಿದ್ದು, ಪ್ರೇಕ್ಷಕರು ಚಿತ್ರ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

ಎ. ಹರ್ಷಾ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ರವಿಶಂಕರ್, ಶರತ್ ಕುಮಾರ್, ಮಧುಬಾಲಾ, ಆದಿತ್ಯ ಮೆನನ್, ಚಿಕ್ಕಣ್ಣ, ಸಾಧು ಕೋಕಿಲ, ನಯನಾ, ಗಿರಿಜಾ ಲೋಕೇಶ್, ಚೇತನ್ ಸೇರಿದಂತೆ ಹಲವು ತಾರಾಗಣವಿದೆ.

ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ನಿರ್ಮಾಣದಲ್ಲಿ ಈ ಚಿತ್ರ ತಯಾರಾಗಿದ್ದು, ಚಿನ್ನಾಂಭಿಕಾ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿಬರುತ್ತಿದೆ.
ಗಣರಾಜ್ಯೋತ್ಸವದ ಪ್ರಯುಕ್ತ ಜ. 25 ರಂದು ಈ ಚಿತ್ರ ತೆರೆಗೆ ಬರುತ್ತಿದೆ. ಸುಮಾರು 400 ಚಿತ್ರ ಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

 

Facebook Comments