ಸಿದ್ದಗಂಗಾ ಶ್ರೀ ಲಿಂಗೈಕ್ಯ, ಪ್ರಧಾನಿ ಮೋದಿ ಸರಣಿ ಟ್ವೀಟ್

ಈ ಸುದ್ದಿಯನ್ನು ಶೇರ್ ಮಾಡಿ

Modi-Tweet--01

ನವದೆಹಲಿ, ಜ.21- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಮಾನದ ಸಂತ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ಲಿಂಗೈಕ್ಯವಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

ಡಾ.ಶ್ರೀ ಶ್ರೀ ಶ್ರೀ ಶಿವಕುಮಾರಸ್ವಾಮೀಜಿಗಳು ಬಡವರು, ದೀನ ದಲಿತರು ಮತ್ತು ದುರ್ಬಲ ವರ್ಗಗಳ ಶಿಕ್ಷಣ ಮತ್ತು ಆರೋಗ್ಯ ಆರೈಕೆಗೆ ಮುಂಚೂಣಿಯಲ್ಲಿದ್ದ ಮಹಾ ಸಂತರು ಎಂದು ಮೋದಿ ಟ್ವೀಟ್‍ನಲ್ಲಿ ಗುಣಗಾನ ಮಾಡಿದ್ದಾರೆ.

ಸಮಾಜ ಸೇವೆ, ಆಧ್ಯಾತ್ಮಿಕ, ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಸೌಲಭ್ಯ ವಂಚಿತರ ಹಕ್ಕುಗಳ ರಕ್ಷಣೆಗಾಗಿ ಉದ್ಧಾತ ಸೇವೆ ಸಲ್ಲಿಸುತ್ತಾ ನಮ್ಮ ಸಂಪ್ರದಾಯದ ಮೌಲ್ಯಗಳನ್ನು ಎತ್ತಿಹಿಡಿದ ಮಹಾಪುರುಷರು ಇವರು ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಪರಮ ಪೂಜ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ಜನರಿಗಾಗಿ ಅದರಲ್ಲೂ ವಿಶೇಷವಾಗಿ ಬಡವರು ಮತ್ತು ದುರ್ಬಲ ವರ್ಗದವರ ಏಳ್ಗೆಗಾಗಿ ಬದುಕಿದ ದೈವ ಸ್ವರೂಪಿಗಳು, ಬಡತನ , ಹಸಿವು ಮತ್ತು ಸಾಮಾಜಿಕ ಅಸಮಾನತೆಯ ನಿರ್ಮೂಲನೆಗಾಗಿ ಅನೇಕ ದಶಕಗಳಿಂದಲೂ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡ ಮಹಾನ್ ಸಂತರ ನಿಧನದಿಂದ ನನಗೆ ಅತೀವ ದುಃಖವಾಗಿದೆ ಎಂದು ಮೋದಿ ಸಂತಾಪ ಸೂಚಿಸಿದ್ದಾರೆ.

 

Tweet

Facebook Comments

Sri Raghav

Admin